ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿ.ಟಿ. ರವಿ ಮಾದಕ ವ್ಯಸನಿ, ದೇಶದ ರಾಜಕಾರಣಿಗಳಲ್ಲಿ ಎಲ್ಲೂ ಕಾಣಸಿಗುವುದಿಲ್ಲ, ಟಾಪ್ 10 ನಲ್ಲಿ ನಂ.1 ಸುಳ್ಳುಗಾರ ಎಂದು ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ಮಾತನಾಡಿದ ಅವರು, ಸಿಟಿ ರವಿ ಅವರು ಸದನದಲ್ಲಿ ಹೆಣ್ಣುಮಗಳಿಗೆ ಅಸಭ್ಯವಾಗಿ ಮಾತನಾಡಿದ್ದಾರೆ ಮತ್ತು ನಾನು ಹಾಗೆ ಹೇಳಿಲ್ಲ ಎಂದು ಹೇಳಿದ್ದಾರೆ. ಕಾನೂನಾತ್ಮಕವಾಗಿ ಅವರನ್ನು ಬಂಧಿಸಿದ್ದರೂ, ತಮ್ಮನ್ನು ಬಂಧಿಸಲಾಗಿದೆ ಎಂದು ವಿಚಿತ್ರವಾಗಿ ಕಾಣುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಾರೆ.
ಬಿಜೆಪಿ ಹಾಗೂ ಸಿ.ಟಿ.ರವಿಗೆ ನಾಚಿಕೆಯಾಗಬೇಕು. ಅದರಲ್ಲೂ ಚಿಕ್ಕಮಗಳೂರಿನಲ್ಲಿ ಬಿಜೆಪಿಯವರು ಸಿ.ಟಿ. ರವಿ ಸ್ವಾತಂತ್ರ್ಯ ಹೋರಾಟಗಾರ ಅನ್ನೋ ರೀತಿಯಲ್ಲಿ ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ. ಯಾವ ದೇಶಕ್ಕಾಗಿ ಹೋರಾಟ ಮಾಡಿದ್ದಾರೆ ಎಂದು ಬಿಂಬಿಸುತ್ತಿದ್ದೀರಾ ಎಂದು ಕಿಡಿಕಾರಿದ್ದಾರೆ.