ಹೊಸದಿಗಂತ ಕಲಬುರಗಿ:
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿ.ಟಿ.ರವಿ ಬಳಸಿದ ಪದ ಅತ್ಯಂತ ಅನಾಗರೀಕವಾಗಿದ್ದು ಇದು ಕ್ರಿಮಿನಲ್ ಅಪರಾಧ. ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿಯಾಗಿದ್ದ ಎಂಎಲ್ಸಿ ಸಿಟಿ ರವಿ ಬಾಯಲ್ಲಿ ಈ ರೀತಿ ಮಾತು ಬಂದಿದ್ದು ನಾಚಿಕೆಗೇಡಿತನದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಇತರೆ ವಿಧಾನ ಪರಿಷತ್ ಸದಸ್ಯರು ಸಿಟಿ ರವಿ ಪದ ಬಳಸಿರುವುದನ್ನು ಕೇಳಿಸಿಕೊಂಡಿದ್ದಾರೆ. ರವಿ ಅತ್ಯಂತ ತುಚ್ಚವಾಗಿ ಮಾತಾಡಿರುವುದು ಸತ್ಯ ಎಂದು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.ಇನ್ನೂ ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ. ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಈ ಬಗ್ಗೆ ಹೇಳಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದ ಅವರು, ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಬೇಕು ಎನ್ನುವ ಬೇಡಿಕೆ ಬಹಳ ವರ್ಷಗಳಿಂದ ಇದೆ. ಪ್ರತ್ಯೇಕ ಸಚಿವಾಲಯ ಮಾಡುವ ಉದ್ದೇಶ ನಮಗೆ ಇದೆ ಎಂದರು.
ಈ ಭಾಗದ ಬಹು ಬೆಳೆಯಾಜ ತೊಗರಿಗೆ ಪ್ರತ್ಯೇಕ ಪ್ಯಾಕೇಜ್ ಘೋಷಿಸಿಬೇಕು ಎನ್ನುವ ಬೇಡಿಕೆ ರೈತರಿಂದ ಇದೆ. ತೊಗರಿ ಬೆಳೆ ಸ್ಥಿತಿ ಗತಿ ಕುರಿತು ವರದಿ ಕೇಳಿದ್ದೇವೆ. ಈ ವರದಿ ಬಂದ ಬಳಿಕ ಆ ಬಗ್ಗೆ ಸೂಕ್ತ. ನಿರ್ಧಾರ ಕೈಗೊಳ್ಳಲಾಗುವುದು ಎಂದರು.