ಹೊಸದಿಗಂತ ಡಿಜಿಟಲ್ ಡೆಸ್ಕ್:
ಸದನದಲ್ಲಿ ಆಕ್ಷೇಪಾರ್ಹ ಪದ ಬಳಕೆ ಆರೋಪದಲ್ಲಿ ಬಂಧನಕ್ಕೊಳಗಾಗಿ ನಂತರ ಬಿಡುಗಡೆಯಾದ ಎಂಎಲ್ಸಿ ಸಿ. ಟಿ ರವಿ ಅವರಿಂದು ತಮ್ಮ ಧರ್ಮಪತ್ನಿ ಪಲ್ಲವಿ ಜೊತೆ ರಾಘವೇಂದ್ರ ಸ್ವಾಮಿ ಮಠಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸಿ. ಟಿ ರವಿ ಬಿಡುಗಡೆಗೆ ಹಾಗೂ ಅವರ ಆರೋಗ್ಯ ಹಾರೈಕೆಗಾಗಿ ಹಲವರು ದೇವರಲ್ಲಿ ಪ್ರಾರ್ಥನೆ ಹಾಗೂ ಹರಕೆ ಹೊತ್ತಿದ್ದರು. ಹಾಗಾಗಿ ಇಂದು ಅವರು ರಾಘವೇಂದ್ರ ಸ್ವಾಮಿಗೆ ದೀರ್ಘ ದಂಡ ನಮಸ್ಕಾರ ಹಾಕಿ ಭಕ್ತಿ ಭಾವ ಮೆರೆದಿದ್ದಾರೆ. ರಾಜ್ಯ ಸರ್ಕಾರಕ್ಕೆ ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಇದು ಹಮ್ಮುರಾಬಿ ಸಿದ್ಧಾಂತದ ಮೇಲೆ ನಂಬಿಕೆ ಇಟ್ಟಿರೋ ಸರ್ಕಾರ ಎಂದು ಸಿ ಟಿ ರವಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಹಮ್ಮುರಾಬಿ ಸಿದ್ಧಾಂತದ ಮೇಲೆ ನಂಬಿಕೆ ಇಟ್ಟವರು ಮಾತ್ರ ಕೊಲೆ, ಹತ್ಯೆ ಮಾಡೋ ಕೆಲಸ ಮಾಡ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಸಂವಿಧಾನದ ಮೇಲೆ ನಂಬಿಕೆ ಇದ್ದಂತೆ ಕಾಣಿಸುವುದಿಲ್ಲ. ಅವರಿಗೆ ನಂಬಿಕೆ ಇರುವುದು ಹಮ್ಮುರಾಬಿ ಸಿದ್ಧಾಂತದ ಮೇಲೆ ಎಂದು ಅವರ ಮಾತಿನ ಮೂಲಕ ವ್ಯಕ್ತವಾಗುತ್ತಿದೆ ಎಂದರು.