ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗೆ ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆಗಳು ನೆಲಸಮ ಮಾಡಲಾಗಿತ್ತು. ಇದಾದ ಒಂದು ವಾರದ ಬಳಿಕ ಕೇರಳ ಸಿಎಂ ಪಿಣರಾಯ್ ವಿಜಯನ್, ಬುಲ್ಡೋಜರ್ ರಾಜ್ ಆಂತಾ ಟ್ವೀಟ್ ಮಾಡಿ ಕುಟುಕಿದ್ದರು.
ಇಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಸಭೆ ಮಾಡಿದ್ದು, ಅರ್ಹರಿಗೆ 7 ಕಿ.ಮೀ ಅಂತರದಲ್ಲಿ 11.2 ಲಕ್ಷ ರೂ ವೆಚ್ಚದಲ್ಲಿ ತಲಾ ಒಂದು ಮನೆ ನಿರ್ಮಿಸಿಕೊಡಲಾಗುವುದು ಎಂದಿದ್ದಾರೆ.
ರಾಜ್ಯ ಸರ್ಕಾರ ಕೋಗಿಲು ಲೇಔಟ್ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಲು ತೀರ್ಮಾನಿಸಿದೆ. ಅರ್ಹರಿಗೆ ಪರಿಹಾರದ ರೂಪದಲ್ಲಿ ಮನೆಗಳ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ಮಾಡಿದ್ದು, ನೋಟಿಸ್ ನೀಡಿದ ಬಳಿಕ ಮನೆಗಳನ್ನು ತೆರವುಗೊಳಿಸಲಾಗಿದೆ. ಡಿ.20ರಂದು ಸುಮಾರು 167 ಮನೆಗಳನ್ನು ತೆರವುಗೊಳಿಸಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.

