ಸಿಯುಇಟಿ ಯುಜಿ ಪರೀಕ್ಷೆ : ಅರ್ಜಿ ಸಲ್ಲಿಕೆ ದಿನಾಂಕ ಮಾ.30ರ ವರೆಗೆ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ವಿಶ್ವವಿದ್ಯಾಲಯಗಳ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಯುಇಟಿ–ಯುಜಿ) ಎರಡನೇ ಆವೃತ್ತಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಮಾರ್ಚ್‌ 30ರವರೆಗೆ ವಿಸ್ತರಿಸಲಾಗಿದೆ.

ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮಾರ್ಚ್‌ 12ರಂದು ಕೊನೆಯಾಗಬೇಕಿತ್ತು. ಆದರೆ ಇದೀಗ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ.

ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿನ ಪದವಿ ಕೋರ್ಸ್‌ಗಳ ಪ್ರವೇಶಾತಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗುವುದು. ಪರೀಕ್ಷೆಯು ಮೇ 21 ರಿಂದ 31ರವರೆಗೆ ಪರೀಕ್ಷೆಗಳು ನಡೆಯಲಿವೆ.

ಪರೀಕ್ಷೆಗೆ ಇನ್ನೂ ಅರ್ಜಿ ಸಲ್ಲಿಸದ ಅಭ್ಯರ್ಥಿಗಳು ಇದೀಗ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!