Saturday, November 1, 2025

ಜಂಬೂಸವಾರಿಗೆ ಸಾಂಸ್ಕೃತಿಕ ನಗರಿ ಸಜ್ಜು: 6ನೇ ಬಾರಿ ಚಿನ್ನದ ಅಂಬಾರಿ ಹೊರಲು ರೆಡಿಯಾದ ಕ್ಯಾಪ್ಟನ್ ಅಭಿಮನ್ಯು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐತಿಹಾಸಿಕ ಮೈಸೂರು ದಸರಾದ ಜಂಬೂ ಸವಾರಿ ನಾಳೆ ನಡೆಯಲಿದೆ. ದಸರಾದಲ್ಲಿ ಜಂಬೂ ಸವಾರಿಯೇ ಪ್ರಮುಖ ಆಕರ್ಷಣೆ. 750 ಕೆ.ಜೆ. ತೂಕದ ಚಿನ್ನದ ಅಂಬಾರಿ ಹೊತ್ತು ಕ್ಯಾಪ್ಟನ್ ಅಭಿಮನ್ಯು ಆನೆ ಹೆಜ್ಜೆ ಹಾಕಲಿದೆ. ಅಭಿಮನ್ಯು ಜೊತೆಗೆ 14 ಆನೆಗಳು ಹೆಜ್ಜೆ ಹಾಕಲಿವೆ. ನಾಳೆ ಸಂಜೆ ಅರಮನೆ ಆವರಣದಲ್ಲಿ ಜಂಬೂ ಸವಾರಿಗೆ ಚಾಲನೆ ಸಿಗಲಿದೆ.

ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ನಾಳೆ ಅರಮನೆ ಅಂಗಳದಲ್ಲಿ ಐತಿಹಾಸಿಕ ಜಂಬೂಸವಾರಿಗೆ ಮಲ್ಲಿಗೆ ನಗರಿ ಮೈಸೂರು ಸಜ್ಜಾಗಿದ್ದು, ಕ್ಯಾಪ್ಟನ್ ಅಭಿಮನ್ಯು ಹೊತ್ತು ಸಾಗುವ 750 ಕೆ.ಜಿ.ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗೋ ತಾಯಿ ಚಾಮುಂಡೇಶ್ವರಿಯನ್ನ ಕಣ್ತುಂಬಿಕೊಳ್ಳಲು ಕ್ಯೋಟ್ಯಂತರ ಜನ ತುದಿಗಾಲಿನಲ್ಲಿ ನಿಂತಿದ್ದಾರೆ.

ಸಂಜೆ 4.42 ಗಂಟೆಯಿಂದ 5.16ರ ನಡುವೆ ಕುಂಭ ಲಗ್ನದಲ್ಲಿ ಜಂಬೂ ಸವಾರಿಗೆ ಚಾಲನೆ ದೊರೆಯಲಿದೆ. ಕ್ಯಾಪ್ಟನ್ ಅಭಿಮನ್ಯು 6ನೇ ಬಾರಿಗೆ ಜಂಬೂಸವಾರಿ ಹೊತ್ತು ಬನ್ನಿಮಂಟಕ್ಕೆ ಹೊರಡಲು ಸಜ್ಜಾಗಿ ನಿಂತಿದ್ದಾನೆ.

ನಗರದಾದ್ಯಂತ 9 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆಯಾಗಿದ್ದು, ಅಂಬಾರಿ ಸಾಗುವ ರಾಜ ಮಾರ್ಗ ಸೇರಿದಂತೆ ನಗರ ವ್ಯಾಪ್ತಿ ಹೆಚ್ಚಿನ ಸಿಸಿಟಿವಿ ಅಳವಡಿಕೆ ಮಾಡಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ.

ಜಂಬೂಸವಾರಿಗೆ ಸಿದ್ಧತೆಗಳೆಲ್ಲಾ ಆಗಿದ್ದು, ಅಂಬಾರಿ ಹೊತ್ತು ಸಾಗುವ ಅಭಿಮನ್ಯು ರಾಜಗಾಂರ್ಭಿಯತೆಯೊಂದಿಗೆ ತಾಯಿ ಚಾಮುಂಡೇಶ್ವರಿ ಆಶೀರ್ವಾದಕ್ಕೂ ಜನ ಕಾತುರದಿಂದ ಕಾಯುತ್ತಿದ್ದಾರೆ.

error: Content is protected !!