ಹೊಸದಿಗಂತ ವರದಿ ತುಮಕೂರು:
ನಗರದ ಶಿರಾ ರಸ್ತೆ ಶ್ರೀದೇವಿ ವೈದ್ಯಕೀಯ ಕಾಲೇಜಿನಲ್ಲಿ ಕುರುಬರ ಸಾಂಸ್ಕೃತಿಕ ಪರಿಷತ್ತು ಬೆಂಗಳೂರು, ಶ್ರೀದೇವಿ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಸಾಹಿತಿಗಳ ಸಾಂಸ್ಕೃತಿಕ ಸಮಾವೇಶ ಹಾಗೂ ಕುರುಬರ ಸಂಸ್ಕೃತಿ ದರ್ಶನ ಮಾಲೆಯ ೩೧ ಗ್ರಂಥಗಳ ಅನಾವರಣ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ನಂತರ 31 ಸಂಗ್ರಹಯೋಗ್ಯ ಕೃತಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸಚಿವರಾದ ಡಾ.ಜಿ.ಪರಮೇಶ್ವರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ, ಶ್ರೀದೇವಿ ಶಿಕ್ಷಣ ಸಮೂಹದ ಅಧ್ಯಕ್ಷ, ವಿಧಾನಪರಿಷತ್ ಮಾಜಿ ಸದಸ್ಯ ಡಾ.ಎಂ.ಆರ್.ಹುಲಿನಾಯ್ಕರ್ ಪಾಲ್ಗೊಂಡಿದ್ದಾರೆ.