Tuesday, June 6, 2023

Latest Posts

ಕೊರೋನಾ ನಿಯಂತ್ರಣಕ್ಕಾಗಿ ಕರ್ಫ್ಯೂ ಜಾರಿ: ಮೈಸೂರು ಮೃಗಾಲಯಕ್ಕೆ ಕುಸಿದ ಆದಾಯ

ಹೊಸದಿಗಂತ ವರದಿ,ಮೈಸೂರು:

ಕೊರೊನಾ ಮತ್ತು ಒಮಿಕ್ರಾನ್ ಸೋಂಕು ದಿನೇ ದಿನೇ ವೇಗವಾಗಿ ಹರಡುತ್ತಿದ್ದು, ಇದನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸುತ್ತಿದೆ. ವಿಕೆಂಡ್ ಕರ್ಫ್ಯೂ, ರಾತ್ರಿ ಕರ್ಫ್ಯೂ ಜಾರಿಗೊಳಿಸಿರುವುದರಿಂದ ಅರಮನೆ ನಗರಿ ಮೈಸೂರಿನಲ್ಲಿರುವ ಚಾಮರಾಜೇಂದ್ರ ಮೃಗಾಲಯಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಇದೀಗ ತೀವ್ರವಾಗಿ ಇಳಿಮುಖವಾಗುತ್ತಿದ್ದು, ಇದರಿಂದಾಗಿ ಮೃಗಾಲಯಕ್ಕೆ ಬರುತ್ತಿದ್ದ ಆದಾಯವು ದೊಡ್ಡ ಪ್ರಮಾಣದಲ್ಲಿ ಕುಸಿಯುತ್ತಿದೆ.
ಕಳೆದ ಡಿಸೆಂಬರ್ ತಿಂಗಳ ಕೊನೆಯ ವಾರದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿತ್ತು. ಆದರೆ, ಜನವರಿಯಿಂದ ಕೊರೋನಾ ಸೋಂಕು ದಿಢೀರನೆ ಸ್ಪೋಟವಾಗಿದೆ. ಅಲ್ಲದೇ ಕೊರೋನಾ ರೂಪಾಂತರಿ ಒಮಿಕ್ರಾನ್ ಸೋಂಕು ಹರಡುವಿಕೆ ಕೂಡ ಹೆಚ್ಚಾಗಿದೆ. ಇದನ್ನು ತಡೆಯಲು ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ, ಮತ್ತೊಂದೆಡೆ ಸೋಂಕು ತಗಲುವ ಭೀತಿ ಶುರುವಾದ ಹಿನ್ನೆಲೆಯಲ್ಲಿ ಮೈಸೂರಿಗೆ ರಾಜ್ಯದಿಂದ ಮಾತ್ರವಲ್ಲ, ನೆರೆ ರಾಜ್ಯಗಳಿಂದ ಬರುವ ಪ್ರವಾಸಿಗರ ಸಂಖ್ಯೆ ತೀವ್ರವಾಗಿ ಇಳಿದಿದೆ. ಪ್ರತಿದಿನ ದಿನ 8 ಸಾವಿರಕ್ಕೂ ಅಧಿಕ ಮಂದಿ ಮೃಗಾಲಯಕ್ಕೆ ಬರುತ್ತಿದ್ದರು. ಆದರೆ, ಕೊರೊನಾ ಮತ್ತು ಒಮಿಕ್ರಾನ್ ಆತಂಕದಿAದ ಇದು 2500ಕ್ಕೆ ಇಳಿದಿದೆ. ಇದರಿಂದ ಮೃಗಾಲಯದ ಆದಾಯಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಹೀಗಾಗಿ ಸಂಕಷ್ಟದ ಸ್ಥಿತಿಯಲ್ಲಿರುವ ಮೃಗಾಲಯಕ್ಕೆ ನೆರವು ನೀಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಸರ್ಕಾರದಿಂದಲೂ ಸಕರಾತ್ಮಕವಾದ ಸ್ಪಂದನೆ ಸಿಕ್ಕಿದೆ ಎಂದು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಹೇಳಿದರು.
ವಾರಾಂತ್ಯ ಕರ್ಫೂ್ಯವಿನಿಂದ ಮೃಗಾಲಯ ಬಂದ್;
ಜನವರಿ 8 ಹಾಗೂ 9 ಮತ್ತು 15 ಹಾಗೂ 16 ರಂದು ವಾರಾಂತ್ಯ ಕರ್ಫೂ್ಯವನ್ನು ಸರ್ಕಾರ ಜಾರಿಗೊಳಿಸಿರುವ ಕಾರಣ ಅಂದು ಮೃಗಾಲಯ ಹಾಗೂ ಕಾರಂಜಿಕೆರೆಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಇದರ ನಷ್ಟ ಸರಿದೂಗಿಸಲು ಮಂಗಳವಾರದAದು ಮೃಗಾಲಯ ಹಾಗೂ ಕಾರಂಜಿಕೆರೆ ತೆರೆಯಲು ಉದ್ದೇಶಿಸಲಾಗಿದೆ ಎಂದು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!