ಹೊಸದಿಗಂತ ಡಿಜಿಟಲ್ ಡೆಸ್ಕ್:
ನೆರೆಯ ಬಾಂಗ್ಲಾದೇಶದಲ್ಲಿ ಇತ್ತೀಚಿನ ಹಿಂಸಾತ್ಮಕ ಪ್ರತಿಭಟನೆಗಳ ನಂತರ ಮೇಘಾಲಯವು ಬಾಂಗ್ಲಾದೇಶದ ಗಡಿಯ ಬಳಿ ರಾತ್ರಿ ಕರ್ಫ್ಯೂ ವಿಧಿಸಿದೆ.
ಈ ಬಗ್ಗೆ ಮೇಘಾಲಯದ ಉಪಮುಖ್ಯಮಂತ್ರಿ ಪ್ರೆಸ್ಟೋನ್ ಟೈನ್ಸಾಂಗ್ ಮಾತನಾಡಿ, ನೆರೆಯ ದೇಶದಲ್ಲಿ ಅಶಾಂತಿಯ ನಡುವೆ ಬಾಂಗ್ಲಾದೇಶದೊಂದಿಗಿನ ಅಂತಾರಾಷ್ಟ್ರೀಯ ಗಡಿಯಲ್ಲಿ ಕರ್ಫ್ಯೂ ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದಿದ್ದಾರೆ.
444 ಕಿಮೀ ಗಡಿಯಲ್ಲಿ ಕರ್ಫ್ಯೂ ಮುಂದಿನ ಸೂಚನೆ ಬರುವವರೆಗೆ ಪ್ರತಿದಿನ ಸಂಜೆ 6ರಿಂದ ಬೆಳಿಗ್ಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಬಿಎಸ್ಎಫ್ ಅಧಿಕಾರಿಗಳು ಮತ್ತು ಮೇಘಾಲಯ ಪೊಲೀಸರೊಂದಿಗೆ ಸಭೆ ನಡೆಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದಲ್ಲದೆ, BSF 4,096 ಕಿಮೀ ಉದ್ದದ ಭಾರತ-ಬಾಂಗ್ಲಾದೇಶ ಗಡಿಯುದ್ದಕ್ಕೂ ತನ್ನ ಎಲ್ಲಾ ಘಟಕಗಳಿಗೆ ‘ಹೈ ಅಲರ್ಟ್’ ನೀಡಿದೆ.