ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಕೊರೋನಾ ಸೋಂಕು ಕಡಿಮೆಯಾಗದ ಹಿನ್ನೆಲೆ ಕರ್ಫ್ಯೂ ಮುಂದುವರಿಸುವ ಬಗ್ಗೆ ಇಂದು ಸಂಜೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗುವುದು.
ಈ ಬಗ್ಗೆ ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ, ಜನತಾ ಕರ್ಫ್ಯೂ ಮುಂದುವರಿಸಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದರ ಬಗ್ಗೆ ಚರ್ಚೆಯಾಗುತ್ತದೆ. ಬೆಳಗ್ಗೆ ಜನರಿಗೆ ವಸ್ತು ಖರೀದಿಗೆ ಅವಕಾಶ ಕೊಟ್ಟರೆ, ಇಡೀ ದಿನ ಓಡಾಡುವ ಜನರೆಲ್ಲ ಒಟ್ಟಿಗೆ ಸೇರುತ್ತಿದ್ದಾರೆ. ಇದನ್ನು ನಿಯಂತ್ರಿಸಬೇಕಿದೆ ಎಂದಿದ್ದಾರೆ.