ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೌದಿ ಅರೇಬಿಯಾದ ರಿಯಾದ್‌ನಿಂದ ನವದೆಹಲಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕನನ್ನು ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಸ್ಟಮ್ಸ್ ಅಧಿಕಾರಿಗಳು ರಾಷ್ಟ್ರ ರಾಜಧಾನಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ತಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಸ್ಟಮ್ಸ್ ಅಧಿಕಾರಿಗಳ ಪ್ರಕಾರ, ವಿಮಾನ ನಿಲ್ದಾಣದ ಭದ್ರತೆಯು ಲಗೇಜ್‌ನ ಎಕ್ಸ್-ರೇ ಸಮಯದಲ್ಲಿ ಅನುಮಾನಾಸ್ಪದ ಚಿತ್ರಗಳನ್ನು ಗಮನಿಸಿದೆ. ಹೆಚ್ಚಿನ ಪರೀಕ್ಷೆ ವೇಳೆ 117.00 ಗ್ರಾಂ ತೂಕದ ಬೆಳ್ಳಿಯ ಬಣ್ಣದ ಚಿನ್ನದ ಬಾರ್ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಇದು ಕ್ರೀಮ್ ಬಾಕ್ಸ್‌ನಲ್ಲಿ ಮುಚ್ಚಿಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ಪ್ರಯಾಣಿಕನನ್ನು ಬಂಧಿಸಿದ್ದಾರೆ, ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ, ಇನ್ನು ಈ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.