ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೆನ್ನೈನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪರೂಪದ ಜಾತಿಯ ಪ್ರಾಣಿಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಕಳ್ಳಸಾಗಣೆದಾರನೊಬ್ಬ ಸಿಕ್ಕಿಬಿದ್ದಿದ್ದಾನೆ. ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ವೇಳೆ ಅಪರೂಪದ ಜೀವಿಗಳು ಪತ್ತೆಯಾಗಿವೆ. ಬ್ಯಾಂಕಾಕ್‌ನಿಂದ ಬಂದಿದ್ದ ಪ್ರಯಾಣಿಕರ ಲಗೇಜ್‌ಗಳನ್ನು ಕಸ್ಟಮ್ಸ್ ಅಧಿಕಾರಿಗಳು ಪರಿಶೀಲಿಸಿದ್ದು, ಇವುಗಳಲ್ಲಿ 45 ಬಾಲ್ ಹೆಬ್ಬಾವು, ಮೂರು ಸ್ಪೈನಿ ಮಂಗಗಳು, ಮೂರು ನಕ್ಷತ್ರ ಆಮೆಗಳು ಮತ್ತು ಎಂಟು ಕಾರ್ನ್ ಹಾವುಗಳು ಪತ್ತೆಯಾಗಿವೆ.
ಕಸ್ಟಮ್ಸ್ ಅಧಿಕಾರಿಗಳು ಅವುಗಳನ್ನು ವಶಪಡಿಸಿಕೊಂಡು ಬ್ಯಾಂಕಾಕ್‌ಗೆ ವಾಪಸ್ ಕಳುಹಿಸಿದ್ದಾರೆ. ಆತನನ್ನು ಸ್ಥಳೀಯ ಪೊಲೀಸರಿಗೆ ಒಪ್ಪಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.