October 18, 2026
Sunday, October 18, 2026
spot_img

ಬೆಂಗಳೂರು ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ: 18.62 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 18.62 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶಕೆ ಪಡೆದಿದ್ದಾರೆ.

ಬ್ಯಾಂಕಾಕ್‌ನಿಂದ ಬಂದು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದ ಮೂವರು ಪ್ರಯಾಣಿಕರ ಬಳಿ 18.62 ಕೋಟಿ ರೂ. ಮೌಲ್ಯದ 52.68 ಕೆ.ಜಿ ಹೈಡ್ರೋಪೊನಿಕ್ ಮಾದಕ ವಸ್ತು ಪತ್ತೆಯಾಗಿದ್ದು, ಕೂಡಲೇ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಕಸ್ಟಮ್ಸ್ ಅಧಿಕಾರಿಗಳು ಎನ್‌ಡಿಪಿಎಸ್ ಆಕ್ಟ್ ಅಡಿ ಮೂವರು ಆರೋಪಿಗಳನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿಸಿದ್ದಾರೆ.

Must Read