March 23, 2026
Monday, March 23, 2026
spot_img

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಬೇಟೆ: 2.97 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ದೇವನಹಳ್ಳಿ ಸಮೀಪದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 2.97 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಈ ಜಾಲಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳು ಥಾಯ್ಲೆಂಡ್‌ನ ಪುಕೆಟ್ ಮತ್ತು ಮಲೇಶಿಯಾದಿಂದ ಕೆಐಎಬಿಗೆ ಆಗಮಿಸಿದ್ದರು. ಇಮಿಗ್ರೇಷನ್ ವಿಭಾಗದಲ್ಲಿ ಪ್ರಯಾಣಿಕರ ಲಗೇಜ್ ಬ್ಯಾಗ್‌ಗಳನ್ನು ತಪಾಸಣೆ ಮಾಡುವಾಗ, ಸಣ್ಣ ಪ್ಯಾಕೆಟ್‌ಗಳಲ್ಲಿ ಅತಿ ಚಾಣಾಕ್ಷತನದಿಂದ ಅಡಗಿಸಿಟ್ಟಿದ್ದ ಮಾದಕ ವಸ್ತು ಪತ್ತೆಯಾಗಿದೆ.

ಒಟ್ಟು 8.5 ಕೆಜಿ ತೂಕದ ದುಬಾರಿ ಹೈಡ್ರೋಪೋನಿಕ್ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಬಂಧಿತರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಈ ಅಕ್ರಮ ಸಾಗಾಟದ ಹಿಂದೆ ಇರುವ ಅಂತರಾಷ್ಟ್ರೀಯ ಜಾಲದ ಬಗ್ಗೆ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !