ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಚ್ಚಿನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಇಲಾಖೆ 48 ಲಕ್ಷ ಮೌಲ್ಯದ 1.005 ಕೆಜಿ ಚಿನ್ನವನ್ನು ವಶಪಡಿಸಿಕೊಂಡ ಘಟನೆ ಭಾನುವಾರ ನಡೆದಿದೆ. ಮಲೇಷ್ಯಾದ ಕೌಲಾಲಂಪುರದಿಂದ ಬಂದಿದ್ದ ಪ್ರಯಾಣಿಕರೊಬ್ಬರಿಂದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೌಲಾಲಂಪುರದಿಂದ ಕೊಚ್ಚಿನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ AK039 ವಿಮಾನದ ಮೂಲಕ ಬಂದಿಳಿದ ಪ್ರಯಾಣಿಕನನ್ನು ಅಧಿಕಾರಿಗಳು ವಿಚಾರಣೆಗಾಗಿ ತಡೆಹಿಡಿದರು. ಆಗ ಆತನ ಒಳ ಉಡುಪಿನ ಜೇಬಿನಲ್ಲಿ ಬಚ್ಚಿಡಲಾಗಿದ್ದ ಮತ್ತು ಪೇಸ್ಟ್ ರೂಪದಲ್ಲಿದ್ದ 1005 ಗ್ರಾಂ ತೂಕದ ಚಿನ್ನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಇದಕ್ಕೂ ಮುನ್ನ ಜುಲೈ 11ರಂದು ಇದೇ ರೀತಿಯ ಘಟನೆ ನಡೆದಿತ್ತು, ಅಂದು ಕಸ್ಟಮ್ಸ್ ಅಧಿಕಾರಿಗಳು ಕೊಚ್ಚಿನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರಿಂದ 554.600 ಗ್ರಾಂ ತೂಕದ ಚಿನ್ನವನ್ನು ವಶಪಡಿಸಿಕೊಂಡಿದ್ದರು.