ಇಂದಿನಿಂದ 2ದಿನಗಳ ಕಾಲ CWC ಸಭೆ, ಹೈದರಾಬಾದ್‌ಗೆ ಕೈ ನಾಯಕರ ದಂಡು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರಾದ ನಂತರ ಮೊದಲ ಬಾರಿಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆ ಇಂದಿನಿಂದ ಎರಡು ದಿನಗಳ ಕಾಲ ಹೈದರಾಬಾದ್‌ನಲ್ಲಿ ನಡೆಯಲಿದೆ. ಈ ಸಭೆಯು ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದು, ತೆಲಂಗಾಣ ಸೇರಿದಂತೆ ಐದು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಕುರಿತು ಚರ್ಚೆ ನಡೆಸಿ ರಣತಂತ್ರ ರೂಪಿಸುವ ಸಾಧ್ಯತೆಯಿದೆ.

ಪಕ್ಷವು ಭಾನುವಾರ ಹೈದರಾಬಾದ್‌ನಲ್ಲಿ ತೆಲಂಗಾಣಕ್ಕೆ ಐದು ಭರವಸೆಗಳನ್ನು ಪ್ರಕಟಿಸಲಿದೆ. ಮಲ್ಲಿಕಾರ್ಜುನ ಖರ್ಗೆ ಕಳೆದ ತಿಂಗಳಷ್ಟೇ ಕಾಂಗ್ರೆಸ್ ನೂತನ ಕಾರ್ಯಕಾರಿ ಸಮಿತಿಯನ್ನು ಘೋಷಿಸಿದ್ದರು. ಖರ್ಗೆ ಜೊತೆಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಕೂಡ ಇಂದು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅದೇ ಸಮಯದಲ್ಲಿ, ಎರಡು ದಿನಗಳ ಈ ಸಭೆಗೆ ದೇಶದಾದ್ಯಂತದ  ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ.

ಮುಂಬರುವ ವಿಧಾನಸಭೆ ಚುನಾವಣೆ, ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆ ಸೇರಿ ಹಲವು ವಿಷಯಗಳ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಯಲಿದೆ. ಇದಲ್ಲದೆ, ಹಣದುಬ್ಬರ, ನಿರುದ್ಯೋಗ, ಮಣಿಪುರದ ಹಿಂಸಾಚಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿಯ ಬಗ್ಗೆ ಮೋದಿ ಸರ್ಕಾರವನ್ನು ಟೀಕಿಸುವ ತಂತ್ರವನ್ನೂ ಹೆಣೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!