ಕಾಮನ್‌ ವೆಲ್ತ್‌ ಗೇಮ್ಸ್‌ನಲ್ಲಿ ಭಾರತದ ಕಮಾಲ್:‌ ಜೂಡೋದಲ್ಲಿ ಬೆಳ್ಳಿ ಗೆದ್ದ ತುಲಿಕಾ ಮಾನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ಬರ್ಮಿಂಗ್ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ 2022 ರ ಮಹಿಳೆಯರ 78 ಕೆಜಿ ವಿಭಾಗದ ಜೂಡೋ ಸ್ಪರ್ಧೆಯಲ್ಲಿ ಭಾರತದ ತುಲಿಕಾ ಮಾನ್ ಬೆಳ್ಳಿ ಪದಕ ಗೆದ್ದಿದ್ದಾರೆ.
ಬುಧವಾರ ತಡರಾತ್ರಿ ನಡೆದ ಫೈನಲ್‌ ಹಣಾಹಣಿಯಲ್ಲಿ 22 ವರ್ಷದ ತುಲಿಕಾ ಮಾನ್‌  ಸ್ಕಾಟ್ಲೆಂಡ್‌ ನ ಸಾರಾ ಅಡ್ಲಿಂಗ್ಟನ್ ವಿರುದ್ಧ ಸೋಲನ್ನು ಅನುಭವಿಸಿ ಬೆಳ್ಳಿ ಪದಕವನ್ನು ಗೆದ್ದರು. ಸೆಮಿಫೈನಲ್‌ನಲ್ಲಿ ಅವರು ನ್ಯೂಜಿಲೆಂಡ್‌ನ ಸಿಡ್ನಿ ಆಂಡ್ರ್ಯೂಸ್ ಅವರನ್ನು ಸೋಲಿಸಿದ್ದರು.

ಈ ಮೂಲಕ ಜೂಡೋದಲ್ಲಿ ಭಾರತ ಮೂರು ಪದಕಗಳನ್ನು ಗೆದ್ದಂತಾಗಿದೆ. ಸೋಮವಾರ ನಡೆದ ಜೂಡೋ ಪುರುಷರ 60 ಕೆಜಿ ವಿಭಾಗದ ಫೈನಲ್‌ನಲ್ಲಿ ವಿಜಯ್ ಕುಮಾರ್ ಯಾದವ್ ಕಂಚಿನ ಪದಕ ಗೆದ್ದಿದ್ದರು. ಮಹಿಳೆಯರ ಜೂಡೋ 48 ಕೆಜಿ ವಿಭಾಗದ ಫೈನಲ್‌ನಲ್ಲಿ ಶುಶೀಲಾ ದೇವಿ ಲಿಕ್ಮಾಬಾಮ್ ಕೂಡ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!