ಕಾಮನ್‌ ವೆಲ್ತ್‌ ಗೇಮ್ಸ್‌ ನಲ್ಲಿ ಭಾರತಕ್ಕೆ ಮತ್ತೊಂದು ಪದಕ: ಬೆಳ್ಳಿ ಗೆದ್ದ ಬಿಂದ್ಯಾರಾಣಿ ದೇವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್
‌ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್ ನ ವೇಟ್‌ಲಿಫ್ಟಿಂಗ್ ಸ್ಪರ್ಧೆಯ ಮಹಿಳೆಯರ 55 ಕೆಜಿ ತೂಕದ ವಿಭಾಗದಲ್ಲಿ ಬೆಳ್ಳಿ ಪದಕ ಗಳಿಸುವ ಮೂಲಕ ಬಿಂದ್ಯಾರಾಣಿ ದೇವಿ ಅವರು ಭಾರತಕ್ಕೆ ನಾಲ್ಕನೇ ಪದಕವನ್ನು ಗೆದ್ದುಕೊಟ್ಟಿದ್ದಾರೆ.
ಮಣಿಪುರದ 22 ವರ್ಷದ ಸ್ಪರ್ಧಿ ಬಿಂದ್ಯಾರಾಣಿ 202 ಕೆಜಿ ತೂಕವನ್ನು ಎತ್ತುವ ಮೂಲಕ ಬೆಳ್ಳಿ ಗೆದ್ದರು. ಕ್ಲೀನ್ ಮತ್ತು ಜರ್ಕ್‌ ವಿಭಾಗದ ಅಂತಿಮ ಸ್ಪರ್ಧೆಯಲ್ಲಿ ಅಮೋಘ 116 ಕೆಜಿ ತೂಕ ಎತ್ತುವ ಮೂಲಕ ಭಾರತಕ್ಕೆ ಪದಕ ದೊರಕಿಸಿಕೊಟ್ಟರು.
ಇದು ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಬಿಂದ್ಯಾರಾಣಿ ಅವರಿಗೆ ಮೊದಲ ಪದಕವಾಗಿದೆ. ಇದಕ್ಕೂ ಮುನ್ನ ಶನಿವಾರ ಮಹಿಳೆಯರ 49 ಕೆಜಿ ವಿಭಾಗದಲ್ಲಿ ಮೀರಾಬಾಯಿ ಚಾನು ಚಿನ್ನದ ಪದಕ, ಪುರುಷರ 55 ಕೆಜಿ ವಿಭಾಗದಲ್ಲಿ ಸಂಕೇತ್ ಸರ್ಗರ್ ಬೆಳ್ಳಿ ಮತ್ತು 61 ಕೆಜಿ ವಿಭಾಗದಲ್ಲಿ ಗುರುರಾಜ ಪೂಜಾರಿ ಕಂಚಿನ ಪದಕ ಗೆದ್ದುಕೊಂಡಿದ್ದು, ಭಾರತ ವೇಟ್‌ಲಿಫ್ಟಿಂಗ್ ಅಖಾಡದಲ್ಲಿ ನಾಲ್ಕು ಪದಕಗಳನ್ನು ಗಳಿಸುವ ಮೂಲಕ ಭರ್ಜರಿ ಆರಂಭ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!