ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿಗೆ ಕಾವೇರಿ ಜಲಾನಯನ ಪ್ರದೇಶದಿಂದ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಕಳೆದ ಸೆ.13ರಂದು ಆದೇಶ ನೀಡಿತ್ತು. ನೀರು ಹರಿಸುವ ಆದೇಶ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು ಮತ್ತೆ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ಪುನಃ ಕರ್ನಾಟಕಕ್ಕೆ ಶಾಕ್ ಕೊಟ್ಟ CWRC ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಿದೆ.
ದೆಹಲಿಯ ಕಾವೇರಿ ನೀರು ನಿಯಂತ್ರಣ ಸಮಿತಿ ಇಂದು ಬೆಳಗ್ಗೆ ವರ್ಚುವಲ್ ಸಭೆಯನ್ನು ಏರ್ಪಡಿಸಲಾಗಿತ್ತು. ಈ ಸಭೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡು ಅಧಿಕಾರಿಗಳು ಭಾಗವಹಿಸಿ ತಮ್ಮ ತಮ್ಮ ವಾದಗಳನ್ನು ಸಮಿತಿ ಮುಂದಿಟ್ಟರು. ಎರಡೂ ಕಡೆಯ ವಾದ ಆಲಿಸಿದ CWRC ಮುಂದಿನ ಹದಿನೈದು ದಿನಗಳ ಕಾಲ ತಮಿಳುನಾಡಿಗೆ ಮೂರು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಆದೇಶಿಸಿದೆ.
ಈಗಾಗಲೇ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು ಬೆಂಗಳೂರು ಬಂದ್ ನಡೆಯುತ್ತಿದೆ. ಶುಕ್ರವಾರ ಕರ್ನಾಟಕ ಬಂದ್ ಮಾಡುವ ಚಿಂತನೆಯಿದೆ. ಈ ನಡುವೆಯೂ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದಿಂದಾಗಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನವಾಗುವ ಸಾಧ್ಯತೆ ಹೆಚ್ಚಿದೆ.