ತಮಿಳುನಾಡು ಸರಕಾರಕ್ಕೆ ಮುಖಭಂಗ: ಕಾವೇರಿ ನೀರು ಬಿಡಲು ಸಾಧ್ಯವಿಲ್ಲ ಎಂದ CWRC!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಕಾವೇರಿ ನದಿ ನೀರು ವಿಚಾರದಲ್ಲಿ ತಮಿಳುನಾಡು ಬೇಡಿಕೆಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ತಿರಸ್ಕರಿಸಿದೆ. 2023-2024 ಜಲವರ್ಷದ ಅಂತಿಮ ಸಭೆಯಲ್ಲಿ ನೀರು ಬಿಡಲು ಸಾಧ್ಯವಿಲ್ಲ ಎಂದು ಸಿಡಬ್ಲ್ಯೂಆರ್‌ಸಿ ಸ್ಪಷ್ಟಪಡಿಸಿದೆ.

ಕರ್ನಾಟಕದಲ್ಲಿ ಬರದ ಪರಿಸ್ಥಿತಿ ಇರುವ ಕಾರಣ ನೀರು ಕೊಡಲು ಸಾಧ್ಯವಿಲ್ಲ, ಹಾಗಾಗಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆಯಿಂದ ನೈಸರ್ಗಿಕವಾಗಿ ನದಿ ಸೇರುವ ನೀರು ಬಳಸಿಕೊಳ್ಳಿ ಎಂದು ದೆಹಲಿಯಲ್ಲಿ ನಡೆದ ಸಭೆಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ತಿಳಿಸಿದೆ.

ಕರ್ನಾಟಕ ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದ್ದು, ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿದೆ. ಇಂತಹ ಬರಗಾಲದ ನಡುವೆಯೂ ಏಪ್ರಿಲ್ ಹಾಗೂ ಮೇ ತಿಂಗಳ ತಮಿಳುನಾಡಿನ ಪಾಲಿನ ನೀರನ್ನು ಬಿಡುವಂತೆ ಅರ್ಜಿ ಸಲ್ಲಿಸಿದ ತಮಿಳುನಾಡು ಸರ್ಕಾರಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮಹಾಮಂಗಳಾರತಿ ಮಾಡಿ ಬರಿಗೈಯಲ್ಲಿ ವಾಪಸ್ ಕಳಿಸಿದೆ.

ಇನ್ನು ಮೇ 21ರಂದು CWMA ಸಭೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!