ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಧಾನಿಯಲ್ಲಿ ಆಂಧ್ರಪ್ರದೇಶ ಮೂಲದ ಚಾಲಾಕಿ ಸೈಬರ್ ಹ್ಯಾಕರ್ ಓರ್ವನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಲಕ್ಷ್ಮೀಪತಿ ಬಂಧಿತ ಆರೋಪಿ. ಆಂಧ್ರಪ್ರದೇಶದ ಚಿತ್ತೂರು ಮೂಲದವನೆಂದು ಹೇಳಲಾಗಿದೆ.
ಆರೋಪಿಯು ಬಿ.ಟೆಕ್ ವಿದ್ಯಾರ್ಹತೆಯನ್ನು ಹೊಂದಿದ್ದು, ಅನೇಕ ಕಂಪನಿಗಳಲ್ಲಿ ಕೆಲಸ ಮಾಡಿದ ಅನುಭವವನ್ನು ಹೊಂದಿದ್ದನು. ಆದರೆ ಈತ ಗ್ರಾಹಕರಿಗೆ ತಲುಪಬೇಕಿದ್ದ ರಿವಾರ್ಡ್ ಪಾಯಿಂಟ್ಸ್ ಅನ್ನು ಹ್ಯಾಕ್ ಮಾಡಿ ದುಬಾರಿ ವಸ್ತುಗಳನ್ನು ಖರೀದಿಸುತ್ತಿದ್ದ ಎಂಬ ಆರೋಪದ ಮೇಲೆ ಬೆಂಗಳೂರಿನ ಆಗ್ನೇಯ ಸೈಬರ್ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತನಿಂದ 4.16 ಕೋಟಿ ಮೌಲ್ಯದ ಚಿನ್ನ, ಬೆಳ್ಳಿ, 11 ಲಕ್ಷದ ನಗದು, 7 ಬೈಕ್ ಜಪ್ತಿ ಮಾಡಿದ್ದಾರೆ.