ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಪ್ರತಿಯೊಬ್ಬ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೈಬರ್ ಅಪರಾಧಗಳ ಕುರಿತು ತರಬೇತಿ ನೀಡಲಾಗುವುದು ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದರು.
ಸೈಬರ್ ಅಪರಾಧಗಳಿಗೆ ಯಾವುದೇ ರೀತಿಯ ಇತಿಮಿತಿಗಳಿಲ್ಲ. ಪ್ರಪಂಚದಲ್ಲಿ ಆಗುತ್ತಿರುವ ಸೈಬರ್ ಅಪರಾಧಗಳ ಕುರಿತು ಅರಿವು ಮೂಡಿಸಬೇಕು ಎಂಬ ಉದ್ದೇಶದಿಂದ ಸಿಸಿಐಟಿಆರ್ ( ಸೆಂಟರ್ ಫಾರ್ ಸೈಬರ್ ಕ್ರೈಂ ಇನ್ವೆಸ್ಟಿಗೇಷನ್ ಟ್ರೈನಿಂಗ್ ಅಂಡ್ ರಿಸರ್ಚ್) ಸ್ಥಾಪಿಸಲಾಗಿದೆ. ಈವರೆಗೆ 46 ಸಾವಿರಕ್ಕೂ ಹೆಚ್ಚು ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದೆ ಎಂದರು.
ಬೆಂಗಳೂರು ನಗರದಲ್ಲಿ ದಾಖಲಾಗುತ್ತಿರುವ ಸಾಮಾನ್ಯ ಅಪರಾಧಗಳಲ್ಲಿ ಶೇ.30ರಷ್ಟು ಸೈಬರ್ ಅಪರಾಧಗಳು ದಾಖಲಾಗುತ್ತಿವೆ. ಇದು ಇನ್ನು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಆರಂಭಿಕ ಹಂತದಲ್ಲೆ ಹೆಚ್ಚು ಫೋಕಸ್ ಮಾಡಿ ತಡೆಗಟ್ಟಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.