January17, 2026
Saturday, January 17, 2026
spot_img

ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ ಕೇಸ್: ಓರ್ವ ಯುವಕ ಸೈಬರ್ ಕ್ರೈಮ್‌ ಪೊಲೀಸರ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ ಹಾಕಿದವರ ಪೈಕಿ ಓರ್ವ ಯುವಕನನ್ನು ಸೈಬರ್ ಕ್ರೈಮ್‌ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಶಕ್ಕೆ ಪಡೆದ ಯುವಕನನ್ನು ಕೊಪ್ಪಳದ ಗಂಗಾವತಿ ತಾಲೂಕಿನ ಸಿಂಗನಾಳ ಗ್ರಾಮದ ಮಂಜುನಾಥ ಎಂದು ಗುರುತಿಸಲಾಗಿದೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ರೇಣುಕಾಸ್ವಾಮಿ ಕುಟುಂಬದ ಪರವಾಗಿ ನಿಂತ ಕಾರಣಕ್ಕೆ ನಟಿ ರಮ್ಯಾಗೆ ದರ್ಶನ್ ಅಭಿಮಾನಿಗಳು ಅಶ್ಲೀಲ ಮೆಸೇಜ್ ಕಳುಹಿಸಿದ್ದರು. ಇದರ ಬೆನ್ನಲ್ಲೇ ದರ್ಶನ್ ಫ್ಯಾನ್ಸ್ ವಿರುದ್ಧ ಗರಂ ಆದ ನಟಿ ಅಶ್ಲೀಲ ಮೆಸೇಜ್ ಕಳುಹಿಸಿದ್ದವರ ಖಾತೆಗಳನ್ನು ಬಹಿರಂಗಗೊಳಿಸಿದ್ದರು. ಜೊತೆಗೆ 43 ಅಕೌಂಟ್‌ಗಳ ವಿರುದ್ಧ ದೂರು ದಾಖಲಿಸಿದ್ದರು. ಇದರ ಬೆನ್ನಲ್ಲೇ ಕಿಡಿಗೇಡಿಗಳ ಪತ್ತೆಗಾಗಿ 6 ತಂಡವನ್ನ ರಚನೆ ಮಾಡಲಾಗಿತ್ತು. ಈವರೆಗೂ ಸಿಸಿಬಿ ಪೊಲೀಸರು ಒಟ್ಟು ನಾಲ್ವರನ್ನು ಬಂಧಿಸಿದ್ದಾರೆ.

Must Read

error: Content is protected !!