October 28, 2026
Wednesday, October 28, 2026
spot_img

ಅರ್ನಬ್‌ ಚಂಡಮಾರುತದ ಅಬ್ಬರಕ್ಕೆ 150 ಕಿ.ಮೀ ವೇಗದಲ್ಲಿ ಬಿರುಗಾಳಿ : ತೆಲಂಗಾಣ, ಒಡಿಶಾಗೆ ಹೈ ಅಲರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ತೀವ್ರ ಸ್ವರೂಪದ ಅರ್ನಬ್‌ ಚಂಡಮಾರುತ ಅಬ್ಬರಕ್ಕೆ ಗರಿಷ್ಠ 150 ಕಿಲೋಮೀಟರ್ ವೇಗದ ಬಿರುಗಾಳಿ ಬೀಳುವ ಸಾಧ್ಯತೆ ಇದ್ದು, ಒಡಿಶಾ ಹಾಗೂ ತೆಲಂಗಾಣದಲ್ಲಿ ಹೈ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಆಂಧ್ರಪ್ರದೇಶದ ಕಾಕಿನಾಡ ಹಾಗೂ ಪುದುಚೆರಿಯ ಯಾನಂ ಕರಾವಳಿ ತೀರದ ನಡುವೆ ಚಂಡಮಾರುತ ಅಪ್ಪಳಿಸಲಿದೆ. ಇದರ ಜೊತೆಗೆ ಒಡಿಶಾ, ತೆಲಂಗಾಣ, ಪಶ್ಚಿಮ ಬಂಗಾಳ ಹಾಗೂ ತಮಿಳುನಾಡಿನ ಕರಾವಳಿ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ.

ಭೂಕುಸಿತ ಇನ್ನಿತರ ಸಮಸ್ಯೆಗಳು ಇನ್ನೂ ಮೂರು ಗಂಟೆಗಳ ಕಾಲ ಸಂಭವಿಸಲಿದೆ. ತದನಂತರ ಚಂಡಮಾರುತವು ಉತ್ತರ ವಾಯುವ್ಯಕ್ಕೆ ಸಾಗಿ ತೆಲಂಗಾಣದತ್ತ ಚಲಿಸುತ್ತದೆ. ಈ ವೇಳೆ ದುರ್ಬಲವಾಗುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಒಡಿಶಾದ 16 ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈಗಾಗಲೇ 48,000ಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ವಿಶಾಖಪಟ್ಟಣಂ, ವಿಜಯವಾಡ ಮತ್ತು ರಾಜಮಂಡ್ರಿ ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಏರ್ ಇಂಡಿಯಾ, ಇಂಡಿಗೋ, ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮತ್ತು ಆಕಾಶ ಏರ್ ಸಂಸ್ಥೆಗಳು ವಿಶಾಖಪಟ್ಟಣ-ದೆಹಲಿ, ಬೆಂಗಳೂರು, ಹೈದರಾಬಾದ್ ಸೇರಿದಂತೆ ಹಲವು ಮಾರ್ಗಗಳ 30ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಿವೆ.

Must Read