ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಪರ್ಜಾಯ್ ಚಂಡಮಾರುತದ ತೀವ್ರತೆಯ ಹಿನ್ನೆಲೆಯಲ್ಲಿ ಭಾರತೀಯ ಕರಾವಳಿ ಕಾವಲು ಪಡೆಗಳು ಫೀಲ್ಡಿಗಿಳಿದಿದ್ದು, ಪರಿಹಾರ ಮತ್ತು ಪುನರ್ವಸತಿ ಕ್ರಮಗಳನ್ನು ಕೈಗೊಂಡಿವೆ. ಗುಜರಾತ್ನ ಓಖಾದಿಂದ ಪಶ್ಚಿಮಕ್ಕೆ 46 ಕಿಲೋಮೀಟರ್ ದೂರದಲ್ಲಿರುವ ಸುರಕ್ಷಿತ ಪ್ರದೇಶಗಳಿಗೆ ಜನರನ್ನು ರವಾನೆ ಮಾಡಲಾಗಿದೆ.
ಜೂನ್ 15ರ ಗುರುವಾರದಂದು ಬಿಪರ್ಜಾಯ್ ಚಂಡಮಾರುತವು ಗುಜರಾತ್ ಕರಾವಳಿಯನ್ನು ದಾಟುವ ಸಾಧ್ಯತೆಯ ಹಿನ್ನೆಲೆಯಲ್ಲಿ ಭಾರತೀಯ ಕೋಸ್ಟ್ ಗಾರ್ಡ್ ತೆರವು ಕಾರ್ಯಾಚರಣೆಯನ್ನು ಕೈಗೊಂಡಿದೆ.
ಭಾರತೀಯ ಕೋಸ್ಟ್ ಗಾರ್ಡ್ ಮತ್ತು ಇತರ ಕೇಂದ್ರೀಯ ಏಜೆನ್ಸಿಗಳು ಮುನ್ನೆಚ್ಚರಿಕೆ ಮತ್ತು ಪರಿಹಾರ ಕ್ರಮಗಳನ್ನು ಕೈಗೊಂಡಿವೆ. ವೇದಾಂತ ಲಿಮಿಟೆಡ್ ನಿರ್ವಹಿಸುತ್ತಿರುವ ಕೀ ಸಿಂಗಾಪುರ್ ಜಾಕ್-ಅಪ್ ತೈಲ ರಿಗ್ನ 50 ಸಿಬ್ಬಂದಿಯನ್ನು ರಕ್ಷಣೆ ಮಾಡಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಕೋಸ್ಟ್ ಗಾರ್ಡ್ ನೌಕೆ ಶೂರ್ ಅನ್ನು ಸಿದ್ಧಪಡಿಸಲಾಗಿದೆ. ಚಂಡಮಾರುತದ ತೀವ್ರತೆಯ ದೃಷ್ಟಿಯಿಂದ ಹೆಚ್ಚುವರಿ ಸ್ಥಳಾಂತರಕ್ಕಾಗಿ ಭಾರತೀಯ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಅನ್ನು ರಾಜ್ ಕೋಟ್ ನಿಂದ ಓಖಾಗೆ ನಿಯೋಜಿಸಲಾಗಿದೆ.