‘ಬಿಪರ್ಜೋಯ್’ ಚಂಡಮಾರುತ ಅಬ್ಬರ: ಕರಾವಳಿ ಜಿಲ್ಲೆಗಳಿಂದ 21,000 ಜನರ ಸ್ಥಳಾಂತರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

‘ಬಿಪರ್ಜೋಯ್’ ಚಂಡಮಾರುತ ಗುರುವಾರ ಸಂಜೆ ವೇಳೆ ಗುಜರಾತ್ ನ ಕಚ್ ಜಿಲ್ಲೆಗೆ ಅಪ್ಪಳಿಸುವ ಸಾಧ್ಯತೆ ಇದ್ದು, ಈ ಹಿನ್ನೆಲೆ ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ ವಿವಿಧ ಕರಾವಳಿ ಜಿಲ್ಲೆಗಳಿಂದ 21,000 ಜನರನ್ನು ತಾತ್ಕಾಲಿಕ ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ .

ಈ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದು, ಕರಾವಳಿಯ 10 ಕಿಮೀ ವ್ಯಾಪ್ತಿಯ ಜನರನ್ನು ಸ್ಥಳಾಂತರಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಅವರು ಹೇಳಿದ್ದಾರೆ.
ಭಾರತೀಯ ಹವಾಮಾನ ಇಲಾಖೆ(IMD) ಪ್ರಕಾರ, ಚಂಡಮಾರುತದ ಪ್ರಭಾವದಿಂದ ಭಾರಿ ಮಳೆ ಮತ್ತು ಭೂಕುಸಿತ ಉಂಟಾಗಲಿದ್ದು, ಗರಿಷ್ಠ ಗಂಟೆಗೆ 150 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಈಗಾಗಲೇ ಕರಾವಳಿಯ ಸಮೀಪದಲ್ಲಿ ವಾಸಿಸುವ ಜನರನ್ನು ಸ್ಥಳಾಂತರಿಸುತ್ತಿದ್ದೇವೆ. ಇಲ್ಲಿಯವರೆಗೆ, ವಿವಿಧ ಜಿಲ್ಲಾಡಳಿತಗಳು ಸುಮಾರು 21,000 ಜನರನ್ನು ತಾತ್ಕಾಲಿಕ ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಿಸಿವೆ. ಸ್ಥಳಾಂತರಿಸುವ ಪ್ರಕ್ರಿಯೆಯು ಇನ್ನೂ ಮುಂದುವರೆದಿದೆ ಮತ್ತು ಎಲ್ಲಾ ಅಪಾಯದಲ್ಲಿರುವ ಎಲ್ಲರನ್ನು ಇಂದು ಸಂಜೆಯೊಳಗೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುವುದು ಎಂದು ರಾಜ್ಯ ಪರಿಹಾರ ಆಯುಕ್ತ ಅಲೋಕ್ ಕುಮಾರ್ ಪಾಂಡೆ ತಿಳಿಸಿದ್ದಾರೆ.

ಬಿಪೊರ್ ಜೋಯ್ ಚಂಡಮಾರುತ ಗುಜರಾತ್ನ ಕಚ್, ದೇವಭೂಮಿ ದ್ವಾರಕಾ ಮತ್ತು ಜಾಮ್ನಗರ ಜಿಲ್ಲೆಗಳ ಮೇಲೆ ಹೆಚ್ಚು ಪರಿಣಾಮ ಬೀರುವ ಸಾಧ್ಯತೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!