ಹೊಸದಿಗಂತ ಡಿಜಿಟಲ್ ಡೆಸ್ಕ್:
ಅರಬ್ಬಿ ಸಮುದ್ರದಲ್ಲಿ ರೂಪುಗೊಂಡಿರುವ ಬಿಪರ್ಜೋಯ್ ಚಂಡಮಾರುತದ ತೀವ್ರತೆ ಉಗ್ರ ರೂಪ ಪಡೆಯುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ತಿಳಿಸಿದೆ. ಈ ಚಂಡಮಾರುತದ ಪ್ರಭಾವದಿಂದಾಗಿ ಕೇರಳಕ್ಕೆ ಮುಂಗಾರು ಪ್ರವೇಶಿಸಲು ಅನುಕೂಲಕರ ವಾತಾವರಣವಿದೆ. ಮುಂದಿನ ಮೂರು ದಿನಗಳಲ್ಲಿ ಚಂಡಮಾರುತವು ತೀವ್ರಗೊಂಡು ಉತ್ತರದ ಕಡೆಗೆ ಚಲಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಭಾರತ, ಓಮನ್, ಇರಾನ್ ಮತ್ತು ಪಾಕಿಸ್ತಾನ ಸೇರಿದಂತೆ ಅರಬ್ಬಿ ಸಮುದ್ರದ ಗಡಿಯಲ್ಲಿರುವ ದೇಶಗಳ ಮೇಲೆ ಪರಿಣಾಮ ಬೀರುವ ಬಗ್ಗೆ ಇನ್ನೂ ಮುನ್ಸೂಚನೆ ನೀಡಲಾಗಿಲ್ಲ. ಜೂನ್ 12 ರವರೆಗೆ ಸೈಕ್ಲೋನ್ ತೀವ್ರತೆ ಹೆಚ್ಚುತ್ತಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಹವಾಮಾನ ಬದಲಾವಣೆಯಿಂದ ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಚಂಡಮಾರುತಗಳು ಬಲಗೊಳ್ಳುತ್ತಿವೆ ಎಂದು ಹೇಳಿದ್ದಾರೆ.
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಕಡಿಮೆ ಒತ್ತಡದ ಪ್ರಭಾವದಿಂದ ದಕ್ಷಿಣ ಪರ್ಯಾಯ ದ್ವೀಪದಲ್ಲಿ ಮಳೆ ಬೀಳಲಿದೆ ಎಂದು ಐಎಂಡಿ ಹಿರಿಯ ವಿಜ್ಞಾನಿ ಹೇಳಿದ್ದಾರೆ. ಚಂಡಮಾರುತದ ತೀವ್ರತೆ ಕಡಿಮೆಯಾದ ನಂತರ, ಮಾನ್ಸೂನ್ ಮುಂದುವರಿಯುತ್ತದೆ ಎಂದು ಐಎಂಡಿ ಹೇಳಿದೆ.