ಬಾಂಗ್ಲಾದೇಶ, ಇರಾಕ್ ಗೆ ಸೈಕ್ಲೋನ್ ಎಂಟ್ರಿ: ಭಾರತದ 18 ರಾಜ್ಯಗಳಿಗೆ ಭಾರೀ ಮಳೆಯ ಮುನ್ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಬಾಂಗ್ಲಾದೇಶ ಮತ್ತು ಇರಾಕ್ ಗೆ ಚಂಡಮಾರುತದ ಲಗ್ಗೆ ಇಡುತ್ತಿದ್ದು, ಇದರ ಪರಿಣಾಮ ಮುಂದಿನ ದಿನಗಳಲ್ಲಿ ಭಾರತದ 18 ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆ (IMD) ಮಳೆಯ ಎಚ್ಚರಿಕೆ ನೀಡಿದೆ.

ಜಮ್ಮು ಮತ್ತು ಕಾಶ್ಮೀರ, ಬಿಹಾರ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ 18 ರಾಜ್ಯಗಳಲ್ಲಿ ಮಾ.15ರವರೆಗೆ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ವರದಿ ತಿಳಿಸಿದೆ.

ಮಾ.12 ಮತ್ತು 13ರಂದು ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಮಾ.13ರಿಂದ 15ರ ನಡುವೆ ರಾಜಸ್ಥಾನದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮಾ.15ರವರೆಗೆ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್‌ನಲ್ಲಿ ಮಳೆ, ಹಿಮಪಾತ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ಮೇಘಾಲಯ ಮತ್ತು ತ್ರಿಪುರಾಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ತಮಿಳುನಾಡು, ಕೇರಳ ಮತ್ತು ಮಾಹೆಯಲ್ಲಿಯೂ ಮಾ.13ರ ಒಳಗಾಗಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಹೀಗಾಗಿ ಪೂರ್ವ ಕರಾವಳಿಯ ಮೀನುಗಾರರು ಪರಿಸ್ಥಿತಿ ಸ್ಥಿರವಾಗುವವರೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಮಾರ್ಚ್ 15ರ ನಂತರ ಚಂಡಮಾರುತದ ಪರಿಸ್ಥಿತಿ ದುರ್ಬಲಗೊಳ್ಳುವ ಸಾಧ್ಯತೆಯಿದ್ದು, ಕೆಲವು ಪ್ರದೇಶಗಳಲ್ಲಿ ಮಳೆ ಮುಂದುವರಿಯುವ ಸಂಭವವಿದೆ ಎಂದು ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!