ಹೊಸದಿಗಂತ ಡಿಜಿಟಲ್ ಡೆಸ್ಕ್:
ಫೆಂಗಲ್ ಚಂಡಮಾರುತವು ತೀವ್ರತೆ ಪಡೆದುಕೊಂಡಿದ್ದು, ಭಾರೀ ಮಳೆಯಿಂದಾಗಿ ಚೆನ್ನೈನಲ್ಲಿ ವಿಮಾನಗಳು ಮತ್ತು ರೈಲುಗಳನ್ನು ಸ್ಥಗಿತಗೊಳಿಸಲಾಗಿದೆ.
ಭಾರೀ ಮಳೆಯಿಂದಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ ಹತ್ತಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಇಂಡಿಗೋ ಎಲ್ಲಾ ಒಳಬರುವ ಮತ್ತು ಹೊರಹೋಗುವ ವಿಮಾನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
ಅದರಂತೆ ಅಬುಧಾಬಿಯಿಂದ ಚೆನ್ನೈಗೆ ತೆರಳುತ್ತಿದ್ದ ಇಂಡಿಗೋ ವಿಮಾನವನ್ನು ಹವಾಮಾನ ವೈಪರೀತ್ಯದಿಂದ ಬೆಂಗಳೂರಿಗೆ ತಿರುಗಿಸಲಾಗಿದೆ.
ಚಂಡಮಾರುತದಿಂದಾಗಿ ತಿರುವಳ್ಳೂರು, ಕಾಂಚೀಪುರಂ, ಕಲ್ಲಕುರಿಚಿ, ಮತ್ತು ತಮಿಳುನಾಡಿನ ಕಡಲೂರು ಜಿಲ್ಲೆಗಳು ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.