September 6, 2026
Sunday, September 6, 2026
spot_img

WEATHER | ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ, ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯಾದ್ಯಂತ ಇಂದು ಸಂಜೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬೆಳಗ್ಗೆ ಆಕಾಶ ತಿಳಿಯಾಗಿರಲಿದ್ದು, ಸಂಜೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕೆಲವು ಜಿಲ್ಲೆಗಳಲ್ಲಿ ಹಗಲಿನಲ್ಲಿ ಹಗುರ ಮಳೆಯ ಮುನ್ಸೂಚನೆ ಇದ್ದು, ರಾತ್ರಿಯ ವೇಳೆ ಆಕಾಶವು ತಿಳಿಯಾಗಿರಲಿದೆ. ಇನ್ನು ನಗರದ ಕೆಲವು ಭಾಗಗಳಲ್ಲಿ ಸಾಯಂಕಾಲ ಅಥವಾ ರಾತ್ರಿಯ ವೇಳೆ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲಿ ಬಿಸಿಲ ನಡುವೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಂಭವವಿದೆ. ಇನ್ನು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆಯ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !