ಮಾಂಡೌಸ್ ಚಂಡಮಾರುತ ಎಫೆಕ್ಟ್: ಚೆನ್ನೈನಲ್ಲಿ 10 ವಿಮಾನಗಳು ರದ್ದು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಮಾಂಡೌಸ್ ಚಂಡಮಾರುತದಿಂದ ಭೀತಿ ಹೆಚ್ಚುತ್ತಿದ್ದು, ಹೀಗಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ 10 ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಮೂಲಕ ವಿವಿಧ ಸ್ಥಳಗಳಿಗೆ ಆಗಮಿಸುವ ಮತ್ತು ಹೊರಡುವ ಒಟ್ಟು 13 ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ಚಂಡಮಾರುತದಿಂದ ಹವಾಮಾನ ವೈಪರೀತ್ಯದಿಂದಾಗಿ ವಿಮಾನಗಳ ಮೇಲೆ ಪರಿಣಾಮ ಬೀರುವ ಹಿನ್ನೆಲೆವಿಮಾನಯಾನ ಸಂಸ್ಥೆಗಳೊಂದಿಗೆ ಪರಿಶೀಲಿಸುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಸಲಹೆ ನೀಡಿದರು.

ಈ ಕುರಿತಂತೆ ಚೆನ್ನೈ (MAA) ವಿಮಾನ ನಿಲ್ದಾಣ ಟ್ವೀಟ್ ಮಾಡಿದ್ದು,ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದಾಗಿ 09.12.2022 ರಂದು ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ರದ್ದತಿಯನ್ನು ದಯವಿಟ್ಟು ಗಮನಿಸಿ. ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ಪ್ರಯಾಣಿಕರು ಸಂಬಂಧಪಟ್ಟ ವಿಮಾನಯಾನ ಸಂಸ್ಥೆಗಳೊಂದಿಗೆ ಪರಿಶೀಲಿಸಲು ವಿನಂತಿಸಿದೆ.

ಮಾಂಡೌಸ್ ಚಂಡಮಾರುತವು ತೀವ್ರತೆ ಹೊಂದುವ ಹಿನ್ನೆಲೆಯಲ್ಲಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡವನ್ನು ಚೆನ್ನೈನಲ್ಲಿ ಸ್ಟ್ಯಾಂಡ್‌ಬೈನಲ್ಲಿ ನಿಯೋಜಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!