Saturday, February 4, 2023

Latest Posts

ಮಾಂಡೌಸ್‌ ಚಂಡಮಾರುತ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಹಳದಿ ಅಲರ್ಟ್‌ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:‌ 

ಈಗಾಗಲೇ ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ಪುದಿಚೇರಿಯಲ್ಲಿ ಮಾಂಡೌಸ್‌ ಚಂಡಮಾರುತ ಅಬ್ಬರ ಜೋರಾಗಿದ್ದು, ಆ ರಾಜ್ಯಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಸೈಕ್ಲೋನ್‌ ಎಫೆಕ್ಟ್‌ ಕರ್ನಾಟಕದ ಮೇಲೆಯೂ ಇದ್ದು ಇಂದು ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಾಗಾಗಿ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಹಳದಿ ಅಲರ್ಟ್‌ ಘೋಷಣೆ ಮಾಡಿದೆ.

ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಅದರಲ್ಲೂ ಕರಾವಳಿ, ಮಲೆನಾಡು ಭಾಗದಲ್ಲಿ ಹೆಚ್ಚು ಮಳೆಯಾಗಲಿದ್ದು, ಈ ಮಳೆ ಡಿಸೆಂಬರ್‌ 13ರವರೆಗೂ ಮುಂದುವರೆಯಲಿದೆ. ಈಗಾಗಲೇ ಬೆಂಗಳೂರು ನಗರ/ಗ್ರಾಮಾಂತರ  ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ಕೋಲಾರ, ತುಮಕೂರು ಮಂಡ್ಯ, ರಾಮನಗರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಸೇರಿದಂತೆ ಒಟ್ಟು 15 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಅದೇ ರೀತಿ ಉತ್ತರ ಒಳನಾಡಿನ ಪ್ರದೇಶಗಳಾದ ರಾಯಚೂರು, ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲಬುರಗಿಯಲ್ಲೂ ಮಳೆಯಾಗಲಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆ ಜೊತೆಗೆ ಥಂಡಿ ವಾತಾವರಣ ನಿರ್ಮಾಣವಾಗಿದೆ. ಮನೆಯಿಂದ ಹೊರಬರಲಾಗದೆ ಜನ ಪರದಾಡುವ ಸ್ಥಿತಿ ಬಂದಿದೆ. ಹಲವೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!