ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಿಚಾಂಗ್ ಚಂಡಮಾರುತ ಅಬ್ಬರಕ್ಕೆ ತಮಿಳುನಾಡಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ಚೆನ್ನೈ ನಗರದಲ್ಲಿ ಪ್ರವಾಹ ಭೀತಿಯುಂಟಾಗಿದೆ.
ಭಾರಿ ಮಳೆ ವಿಮಾನ ಸಂಚಾರಗಳ ಮೇಲೆಯೂ ಪರಿಣಾಮ ಬೀರಿದೆ. ಚೆನ್ನೈನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನಗಳನ್ನು ಡೈವರ್ಟ್ ಮಾಡಲಾಗಿದೆ.
ಚೆನ್ನೈ ನಲ್ಲಿ ಲ್ಯಾಂಡ್ ಆಗಬೇಕಿದ್ದ ಒಟ್ಟು 27 ವಿಮಾನಗಳನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಡೈವರ್ಟ್ ಮಾಡಲಾಗಿದ್ದು, ಏರ್ ಪೋರ್ಟ್ ನಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ.
ಕೆಂಪೇಗೌಡ ಏರ್ ಪೋರ್ಟ್ ರನ್ ವೇನಲ್ಲಿ ಡೈವರ್ಟ್ ಆಗಿರುವ ವಿಮಾನಗಳು ನಿಂತಿದ್ದು, ಪ್ರಯಾಣಿಕರು ವಿಮಾನದಲ್ಲಿಯೇ ಕಾಲಕಳೆಯುವಂತಾಗಿದೆ. ಈ ಮಧ್ಯೆ ಪ್ರಯಾಣಿಕರಿಗೆ ವಿಮಾನ ಯಾನ ಸಂಸ್ಥೆಗಳು ಊಟದ ವ್ಯವಸ್ಥೆ ಮಾಡಿವೆ ಎಂದು ತಿಳಿದುಬಂದಿದೆ.