ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು, ಚೆನ್ನೈನಲ್ಲಿ ಮಿಚಾಂಗ್ ಚಂಡಮಾರುತದ ಅಬ್ಬರ ಜೋರಾಗಿದೆ.ಇದರ ಪರಿಣಾಮ ಭಾರತೀಯ ರೈಲ್ವೆ ಸುಮಾರು 10 ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಿದೆ.
ಕರ್ನಾಟಕ ರಾಜ್ಯದಿಂದ ತೆರಳಬೇಕಿದ್ದ ಹತ್ತಕ್ಕೂ ಹೆಚ್ಚು ರೈಲುಗಳನ್ನು ರದ್ದು ಮಾಡಲಾಗಿದೆ . ಚೆನ್ನೈನಲ್ಲೂ ಭಾರಿ ಮಳೆಯಾಗುತ್ತಿದ್ದು ಚೆನ್ನೈ ಏರ್ಪೋರ್ಟ್ನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನಗಳನ್ನು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಡೈವರ್ಟ್ ಮಾಡಲಾಗಿದೆ.
ತಮಿಳುನಾಡಿನ ಬಹುತೇಕ ರೈಲ್ವೆ ನಿಲ್ದಾಣಗಳು ನೀರಿನಿಂದ ತುಂಬಿದ್ದು, ಕೆಲವೆಡೆ ಸಂಚಾರಕ್ಕೆ ಅಡ್ಡಿಯಾಗಿದೆ. ಕರ್ನಾಟಕ ರಾಜ್ಯದಿಂದ ತೆರಳಬೇಕಿದ್ದ ಹತ್ತಕ್ಕೂ ಹೆಚ್ಚು ರೈಲುಗಳನ್ನು ರದ್ದು ಮಾಡಲಾಗಿದ್ದು, ಇಂದು ಯಾವ ರೈಲು ಕೂಡ ತಮಿಳುನಾಡಿಗೆ ಹೋಗುವುದಿಲ್ಲ ಎಂದು ನೈರುತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ.