ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಿಚುಂಗ್ ಚಂಡಮಾರುತ ತಮಿಳುನಾಡಿನಲ್ಲಿ ಅಬ್ಬರಿಸುತ್ತಿದ್ದು, ಇದರ ಪರಿಣಾಮ ರಾಜ್ಯದಲ್ಲೂ ನಾಳೆ, ನಾಡಿದ್ದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆ ನೀಡಿದೆ.
ಮುಂದಿನ 24 ಗಂಟೆಗಳಲ್ಲಿ ಮಿಚುಂಗ್ ಸೈಕ್ಲೋನ್ ತೀವ್ರಗೊಳ್ಳುವ ನಿರೀಕ್ಷೆಯಿದ್ದು, ರಾಜ್ಯದಲ್ಲಿ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಇದೆ.ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಹಾಗೂ ಉತ್ತರ ಕನ್ನಡದಲ್ಲಿಭಾರಿ ಮಳೆಯಾಗಬಹುದು ಎಂದು ಹಮಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಲಬರಗಿ, ಯಾದಗಿರಿ ಹಾಗೂ ಬೀದರ್ ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.