Sunday, December 3, 2023

Latest Posts

ಮಿಧಿಲಿ ಚಂಡಮಾರುತದ ಪ್ರಭಾವ: ದೇಶದ ಹಲವು ಭಾಗಗಳಲ್ಲಿ ಮಳೆ ಸಾಧ್ಯತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಶುಕ್ರವಾರ ಬೆಳಗ್ಗೆ ವಾಯುವ್ಯ ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ಮಿಧಿಲಿ ಚಂಡಮಾರುತ ಸಂಜೆ ಬಾಂಗ್ಲಾದೇಶದ ಖೇಪುವಾರ ಕರಾವಳಿಗೆ ಅಪ್ಪಳಿಸಿದೆ. ಕರಾವಳಿಯನ್ನು ದಾಟಿದ ಮಿಧಿಲಿ ಚಂಡಮಾರುತದಿಂದಾಗಿ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿ ಪ್ರದೇಶಗಳಲ್ಲಿ ಗಂಟೆಗೆ 80 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಚಂಡಮಾರುತದ ಪ್ರಭಾವದಿಂದ ಪಶ್ಚಿಮ ಬಂಗಾಳ, ಒಡಿಶಾ ಮತ್ತು ಎಪಿಯ ಹಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಮೀನುಗಾರರು ಬೇಟೆಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.

ಮುಂದಿನ 48 ಗಂಟೆಗಳಲ್ಲಿ ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಮಿಜೋರಾಂ ಮತ್ತು ತ್ರಿಪುರದ ಕೆಲವು ಭಾಗಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಇನ್ನು ಕೆಲವೆಡೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಪಶ್ಚಿಮ ಬಂಗಾಳದ ಗಂಗಾ ಜಲಾನಯನ ಪ್ರದೇಶದ ಕೆಲವು ಭಾಗಗಳಲ್ಲಿ ಹಠಾತ್ ಪ್ರವಾಹದ ಅಪಾಯವಿದೆ ಎಂದು ಹವಾಮಾನ ಇಲಾಖೆ ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳ ಕರಾವಳಿ ಭಾಗದ ನಿವಾಸಿಗಳಿಗೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!