ತೀವ್ರ ಪರಿಣಾಮ ಬೀರಲಿದೆ ಮೋಚಾ: ಫೀಲ್ಡಿಗಿಳಿದ 200 ಎನ್‌ಡಿಆರ್‌ಎಫ್ ಸಿಬ್ಬಂದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮುಂದಿನ ಆರು ಗಂಟೆಗಳಲ್ಲಿ ಬಂಗಾಳ ಕೊಲ್ಲಿಯಲ್ಲಿ ಮೋಚಾ ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಎಚ್ಚರಿಕೆ ನೀಡಿದೆ. ಚಂಡಮಾರುತ ತೀವ್ರಗೊಂಡು ಉತ್ತರ-ಈಶಾನ್ಯದ ಕಡೆಗೆ ಚಲಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮೇ 14 ರಂದು ಮಧ್ಯಾಹ್ನದ ಸುಮಾರಿಗೆ ಬಾಂಗ್ಲಾದೇಶದ ಕಾಕ್ಸ್ ಬಜಾರ್ ಮತ್ತು ಮ್ಯಾನ್ಮಾರ್‌ನ ಕ್ಯುಕ್ಪಿಯು ನಡುವೆ ಆಗ್ನೇಯ ಬಾಂಗ್ಲಾದೇಶ ಮತ್ತು ಉತ್ತರ ಮ್ಯಾನ್ಮಾರ್‌ನ ಕರಾವಳಿಯನ್ನು ದಾಟಲಿದೆ.

150-160 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಸಿಟ್ವೆ ಸಮೀಪ ತೀವ್ರ ಚಂಡಮಾರುತವಾಗಿ ಮಾರ್ಪಡುವ ಸಾಧ್ಯತೆ ಇದೆ. ಚಂಡಮಾರುತದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಎಂಟು ತಂಡಗಳನ್ನು ನಿಯೋಜಿಸಲಾಗಿದೆ.

NDRF 2 ನೇ ಬೆಟಾಲಿಯನ್ ಕಮಾಂಡೆಂಟ್ ಗುರ್ಮಿಂದರ್ ಸಿಂಗ್ ಪ್ರಕಾರ, “ಮೋಚಾ ಮೇ 12 ರಂದು ತೀವ್ರ ಚಂಡಮಾರುತವಾಗಿ ಮತ್ತು ಮೇ 14 ರಂದು ತೀವ್ರವಾಗುವುದರಿಂದ ನಾವು 8 ತಂಡಗಳನ್ನು ನೇಮಿಸಿದ್ದೇವೆ. ಎನ್‌ಡಿಆರ್‌ಎಫ್‌ನ 200 ಸಿಬ್ಬಂದಿಯನ್ನು ಬಂಗಾಳದಲ್ಲಿ ನಿಯೋಜಿಸಲಾಗಿದೆ” ಎಂದರು.

ಮೋಚಾ ಚಂಡಮಾರುತದ ಹಿನ್ನೆಲೆಯಲ್ಲಿ, ಹವಾಮಾನ ಸಂಸ್ಥೆ ಗುರುವಾರ ಹಲವಾರು ಈಶಾನ್ಯ ರಾಜ್ಯಗಳು ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಮಳೆಯ ಎಚ್ಚರಿಕೆಯನ್ನು ನೀಡಿದೆ. ಮಾಡಿದ ಬಂಗಾಳಕೊಲ್ಲಿಯ ಮಧ್ಯಭಾಗದಲ್ಲಿರುವ ವಾಯುಪರಿಚಲನೆಯ ಪರಿಣಾಮದಿಂದ ಈ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!