ಒಡಿಶಾ ಕರಾವಳಿಯಲ್ಲಿ ಸೈಕ್ಲೋನ್‌: ಬೆಂಗಳೂರಿನಲ್ಲಿ ಇಷ್ಟು ಬೇಗ ʼಕತ್ತಲುʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಒಡಿಶಾ ಕರಾವಳಿಯಲ್ಲಿ ಸೈಕ್ಲೋನ್ ಪರಿಣಾಮವಾಗಿ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇದೆ.ಬಿಸಿಲಿನ ಬೇಗೆ ಮಧ್ಯೆ ಮಳೆಯ ಮುನ್ಸೂಚನೆ ಸಿಕ್ಕಿದೆ. ಇಂದು ರಾಜಧಾನಿ ಸೇರಿ ರಾಜ್ಯದ ಹಲವೆಡೆ ಮಳೆ ಮನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಬೆಂಗಳೂರಿಗೆ ಮಳೆ ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ವಿಜಯಪುರ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!