ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಿಜೋರಾಂನಲ್ಲೂ ರೆಮೆಲ್ ಚಂಡಮಾರುತದ ಅಬ್ಬರಿಸಿದ್ದು, ಕಲ್ಲು ಕ್ವಾರಿ ಕುಸಿತವಾಗಿದೆ. ಇದರಿಂದಾಗಿ 10 ಮಂದಿ ಮೃತಪಟ್ಟಿದ್ದಾರೆ.
ಮಂಗಳವಾರ ಬೆಳಗ್ಗೆ ಭಾರೀ ಮಳೆಯ ನಡುವೆ ಮಿಜೋರಾಂನ ಐಜ್ವಾಲ್ ಜಿಲ್ಲೆಯಲ್ಲಿ ಕಲ್ಲಿನ ಕ್ವಾರಿ ಕುಸಿದು ಹತ್ತು ಜನರು ಸಾವನ್ನಪ್ಪಿದ್ದಾರೆ. ಹಲವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರೆಮಲ್ ಚಂಡಮಾರುತವು ರಾಜ್ಯಾದ್ಯಂತ ಅನಾಹುತಗಳನ್ನು ಸೃಷ್ಟಿಸಿದೆ.
ನಂತರ ಐಜ್ವಾಲ್ ಪಟ್ಟಣದ ದಕ್ಷಿಣ ಹೊರವಲಯದಲ್ಲಿರುವ ಮೆಲ್ತಮ್ ಮತ್ತು ಹ್ಲಿಮೆನ್ ನಡುವಿನ ಪ್ರದೇಶದಲ್ಲಿ ಬೆಳಗ್ಗೆ 6 ಗಂಟೆಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತದೇಹಗಳನ್ನು ಹೊರತೆಗೆಯಲಾಗಿದೆ. ಆದಾಗ್ಯೂ, ಇನ್ನೂ ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.