ಪಶ್ಚಿಮ ಬಂಗಾಳದ ಕಡಲತೀರಕ್ಕೆ ಬಂತು ರೆಮಲ್ ಚಂಡಮಾರುತ: ಹಲವೆಡೆ ಭೂಕುಸಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪಶ್ಚಿಮ ಬಂಗಾಳದ ಕರಾವಳಿಗೆ ರೆಮಲ್​ ಚಂಡಮಾರುತ ಬಂದು ಅಪ್ಪಳಿಸಿದ್ದು, ಹಲವೆಡೆ ಭೂಮಿ ಕಂಪಿಸಿದೆ. ರೆಮೆಲ್‌ ಚಂಡಮಾರುತದ ಎಫೆಕ್ಟ್‌ ಬಿಹಾರಕ್ಕೂ ಗೋಚರಿಸಲಿದೆ.

ರೆಮಲ್ ಚಂಡಮಾರುತದ ಪ್ರಭಾವದ ಹಿನ್ನೆಲೆಯಲ್ಲಿ ಕೋಲ್ಕತ್ತಾ-ಪಾಟ್ನಾ ನಡುವೆ ಹಾರಾಟ ನಡೆಸುತ್ತಿದ್ದ ಎರಡು ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಇದರಿಂದಾಗಿ 700ಕ್ಕೂ ಹೆಚ್ಚುಪ್ರಯಾಣಿಕರು ತೊಂದರೆ ಅನುಭವಿಸಿದ್ದಾರೆ.

ಹವಾಮಾನ ಇಲಾಖೆಯು ಪಶ್ಚಿಮ ಬಂಗಾಳ ಮತ್ತು ಒಡಿಶಾ ಹೊರತುಪಡಿಸಿ ಬಹುತೇಕ ಎಲ್ಲಾ ಈಶಾನ್ಯ ರಾಜ್ಯಗಳಲ್ಲಿ ಬಲವಾದ ಗಾಳಿಯೊಂದಿಗೆ ಮಳೆಯಾಗುತ್ತಿದೆ. ಚಂಡಮಾರುತದ ಪ್ರಭಾವ ಈ ರಾಜ್ಯಗಳಲ್ಲಿ ಒಂದೆರಡು ದಿನ ಇರಬಹುದು. ಸೋಮವಾರ ಹಾಗೂ ಮಂಗಳವಾರ ಅಸ್ಸಾಂ, ಮೇಘಾಲಯ, ಮಣಿಪುರ, ನಾಗಾಲ್ಯಾಂಡ್​, ಅರುಣಾಚಲಪ್ರದೇಶ ಹಾಗೂ ತ್ರಿಪುರಾದಲ್ಲಿ ಭಾರಿ ಮಳೆಯ ನಿರೀಕ್ಷೆ ಇದೆ.

ಚಂಡಮಾರುತದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಸೂಕ್ಷ್ಮ ಪ್ರದೇಶಗಳಿಂದ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ 21 ಗಂಟೆಗಳ ಕಾಲ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಇದು ದೇಶೀಯ ಹಾಗೂ ಅಂತಾರಾಷ್ಟ್ರೀಯ ಸೇರಿದಂತೆ 394 ವಿಮಾನಗಳ ಮೇಲೆ ಪರಿಣಾಮ ಬೀರುತ್ತದೆ. ಕೋಲ್ಕತ್ತಾದ ಶ್ಯಾಮ್ ಪ್ರಸಾದ್ ಮುಖರ್ಜಿ ಬಂದರಿನಲ್ಲಿ ಸರಕು ಹಾಗೂ ಕಂಟೈನರ್ ನಿರ್ವಹಣೆ ಕಾರ್ಯಾಚರಣೆಯನ್ನು ಭಾನುವಾರ ಸಂಜೆಯಿಂದ 12 ಗಂಟೆಗಳ ಕಾಲ ನಿಲ್ಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!