ಶೀಘ್ರದಲ್ಲೇ ಮುಂಬೈಗೆ ಅಪ್ಪಳಿಸಲಿದೆ ತೇಜ್ ಚಂಡಮಾರುತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇನ್ನೇನು ಕೆಲವೇ ದಿನಗಳಲ್ಲಿ ಮುಂಬೈಗೆ ತೇಜ್ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಅರಬ್ಬಿ ಸಮುದ್ರರ ಆಗ್ನೇಯ ಭಾಗದಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿದ್ದು, ಇನ್ನೆರಡು ದಿನದಲ್ಲಿ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಈ ಚಂಡಮಾರುತದ ತೀವ್ರತೆ ಬಗ್ಗೆ ಈಗಲೇ ಊಹಿಸಲು ಸಾಧ್ಯವಿಲ್ಲ, ಮೊದಲು ಶಾಂತವಾಗಿದ್ದು, ಕ್ರಮೇಣ ಬಲಗೊಳ್ಳುವ ಸಾಧ್ಯತೆ ಇದೆ. ಈ ಬಗ್ಗೆ ನಿಗಾ ಇರಿಸಲಾಗಿದ್ದು, ಅರಬ್ಬಿ ಸಮುದ್ರದ ಮೀನುಗಾರರಿಗೆ ದಡಕ್ಕೆ ಮರಳುವಂತೆ ಸೂಚನೆ ನೀಡಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!