ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಂಗಾಳಕೊಲ್ಲಿಯಲ್ಲಿ ಮತ್ತೊಮ್ಮೆ ಚಂಡಮಾರುತ ರೂಪುಗೊಳ್ಳುತ್ತಿದೆ. ಇದರಿಂದಾಗಿ ದೇಶದ ಹಲವು ಭಾಗಗಳಲ್ಲಿ, ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಿಶೇಷವಾಗಿ ಪೂರ್ವ ರಾಜ್ಯಗಳಲ್ಲಿ ಗಂಟೆಗೆ 40 ರಿಂದ 60 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಇಂದಿನಿಂದ ಮಾರ್ಚ್ 22 ರವರೆಗೆ ಉತ್ತರ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಅರುಣಾಚಲ ಪ್ರದೇಶದಲ್ಲಿ ಮಾರ್ಚ್ 23 ರವರೆಗೆ ಭಾರೀ ಮಳೆ ಮತ್ತು ಹಿಮಪಾತವಾಗುವ ನಿರೀಕ್ಷೆಯಿದ್ದರೆ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಗಳಲ್ಲಿ ಮುಂದಿನ 5 ದಿನಗಳವರೆಗೆ ಮಳೆಯಾಗುವ ನಿರೀಕ್ಷೆಯಿದೆ.
ಕರ್ನಾಟಕದ ರಾಜ್ಯದ ಗಡಿಜಿಲ್ಲೆ ಕಾಸರಗೋಡಿನಲ್ಲಿ ಈಗಾಗಲೇ ಮುಂಜಾನೆ ಮಳೆಯಾಗಿದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಧರ್ಮಸ್ಥಳ, ಬೆಳ್ತಂಗಡಿ ಸುತ್ತಮುತ್ತ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.