Saturday, April 1, 2023

Latest Posts

ಹುಲಿಗಿ ಗ್ರಾಮದಲ್ಲಿ ಸೈಕ್ಲೋಥಾನ್ ಜನಜಾಗೃತಿ ಜಾಥಕ್ಕೆ ಚಾಲನೆ

ಹೊಸ ದಿಗಂತ ವರದಿ, ಕೊಪ್ಪಳ:

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ಎನ್.ಸಿ.ಡಿ. ಕೋಶದ ಸಂಯುಕ್ತಾಶ್ರಯದಲ್ಲಿ ಹುಲಿಗಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಆವರಣದಲ್ಲಿ “ವಿಶ್ವ ಮಹಿಳಾ ದಿನಾಚರಣೆ” ಅಂಗವಾಗಿ “ಸೈಕ್ಲೋಥಾನ್” ಜನಜಾಗೃತಿ ಜಾಥಾ ಕಾರ್ಯಕ್ರಮ ಸೋಮವಾರ ಹುಲಿಗಿ ಗ್ರಾಮದಲ್ಲಿ ನಡೆಯಿತು.
ಈ ವರ್ಷ “ಆರೋಗ್ಯವಂತ ಮಹಿಳೆಯರಿಂದ ಆರೋಗ್ಯಕರ ಭಾರತ” ಎಂಬ ಘೋಷವಾಕ್ಯದೊಂದಿಗೆ ಸಮುದಾಯದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ ನಂದಕುಮಾರ ಅವರು ಹಸಿರು ನಿಶಾನೆ ತೊರಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಅವರು ಮಾತನಾಡಿ, ಪ್ರತಿ ವರ್ಷ ಮಾರ್ಚ್ 08 ರಂದು ವಿಶ್ವ ಮಹಿಳಾ ದಿನಾಚರಣೆ ಆಚರಿಸಲಾಗುತ್ತದೆ. ಸೈಕ್ಲೋಥಾನ್ ಜನಜಾಗೃತಿ ಕಾರ್ಯಕ್ರಮದ ಮೂಲಕ ಮಹಿಳೆಯರು ಆರೋಗ್ಯವಾಗಿರಲು ಅನುಸರಿಸಬೇಕಾದ ಕ್ರಮಗಳು ಹಾಗೂ ಸಲಹೆಗಳನ್ನು ನೀಡುವುದಾಗಿದೆ. ಮಹಿಳೆಯರು ದೈಹಿಕವಾಗಿ ಚಟುವಟಿಕೆಯಿಂದಿರಬೇಕು. ತಂಬಾಕು ಗುಟಕಾ ಸೇವನೆ ಮಾಡಬಾರದು. ವಿಷೇಶವಾಗಿ ಗರ್ಭಿಣಿಯರು ಮತ್ತು ಬಾಣಂತಿಯರು ತಂಬಾಕಿನಿಂದ ಮತ್ತು ಮಧ್ಯಪಾನ ಸೇವನೆಯಿಂದ ದೂರವಿರಬೇಕು. ಆರೋಗ್ಯಕರ ಪೌಷ್ಠಿಕ ಆಹಾರ ಸೇವನೆ ಮಾಡುವುದು, ಪ್ರತೀ ವರ್ಷಕ್ಕೊಮ್ಮೆ ವೈದ್ಯರಿಂದ ಆರೋಗ್ಯ ತಪಾಸಣೆಗೊಳಪಡಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಹುಲಿಗಿ ಪ್ರಾ.ಆ.ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳಾದ ಡಾ ಶಫಿಉಲ್ಲಾ, ಡಾ ಅರ್ಪಿತಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಿವಾನಂದ ಪೂಜಾರ, ಜಿಲ್ಲಾ ಸರ್ವೇಕ್ಷಣಾ ಘಟಕದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಲ್.ವ್ಹಿ ಸಜ್ಜನ, ಬಿ.ಹೆಚ್.ಇ.ಓ ಗಂಗಮ್ಮ, ಹಿ.ಪ್ರಾ.ಆ.ಸು ವಂದನಾ, ತಾಲೂಕಾ ಆಶಾ ಮೇಲ್ವಿಚಾರಕಿ ಸಂಧ್ಯಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಛೇರಿಯ ಡಿ.ಇ.ಓ. ಪ್ರಲ್ಹಾದ ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!