ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಂಡರ್ ಸ್ಪೋಟಗೊಂಡು ಮನೆಯಲ್ಲಿ ತಾಯಿ-ಮಗು ಸಾವನ್ನಪ್ಪಿರುವ ಘಟನೆ ಪೂಂಚ್ ಜಿಲ್ಲೆಯ ಬುಫ್ಲಿಯಾಜ್ ಬ್ಲಾಕ್‌ನ ಚಂಡಿಮಾರ್ಹ್ ಗ್ರಾಮದ ಮನೆಯೊಂದರಲ್ಲಿ ನಡೆದಿದೆ. ಸಿಲಿಂಡರ್ ಸ್ಫೋಟದಲ್ಲಿ 35 ವರ್ಷ ವಯಸ್ಸಿನ ಮಹಿಳೆ ಮತ್ತು 3 ವರ್ಷದ ಮಗು ಸಾವನ್ನಪ್ಪಿದ್ದಾರೆ. ಮತ್ತೊಂದು ಮಗು ಗಂಭೀರ ಗಾಯಗೊಂಡಿದ್ದು, ಮಗುವಿನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿಸುಬಂದಿದೆ.
ಸದ್ಯ ಗಾಯಗೊಂಡಿರುವ ಮಗುವನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.