ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿಜೆ ಹಳ್ಳಿಯ ಆನಂದ್ ಥಿಯೇಟರ್ ಬಳಿ ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಫೋಟದಿಂದ ಮೂರು ಮನೆಗಳಿಗೆ ಬೆಂಕಿ ತಗುಲಿದ್ದು, ಒಂದೇ ಕುಟುಂಬದ ನಾಲ್ವರು ಗಾಯಗೊಂಡಿದ್ದಾರೆ.
ನಿನ್ನೆ ರಾತ್ರಿ 11.30ರ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡಿದೆ. ಈ ಘಟನೆಯಲ್ಲಿ ಪತಿ ನಾಜೀರ್, ಪತ್ನಿ ಕುಲ್ಸುಮ್ ಹಾಗೂ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಗಾಯಾಳುಗಳು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಸ್ಫೋಟದ ತೀವ್ರತೆಗೆ ಮೂರು ಮನೆಗಳು ನಾಶವಾಗಿದೆ.
ರೆಗ್ಯುಲೇಟರ್ ಆನ್ ಆಗಿದ್ದರಿಂದ ಗ್ಯಾಸ್ ಲೀಕೇಜ್ ಆಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಡಿಜೆ ಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.