ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಕುಮಾರಸ್ವಾಮಿ ರಸ್ತೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂದು ಮನೆಯಲ್ಲಿ ಉಪಹಾರ ತಯಾರಿಸುತ್ತಿದ್ದಾಗ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ. ಇದರಿಂದ ಮನೆಯಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಮ್, ರಾಕೇಶ್, ಕೃಷ್ಣ, ಹರಿರಾಮ್ ಸೇರಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಲಿಂಡರ್ ಸೋರಿಕೆಯಾಗಿದ್ದು, ಗ್ಯಾಸ್ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.