ನೆಲಮಂಗಲದ ವಾಜರಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟ : ಇಬ್ಬರಿಗೆ ಗಂಭೀರ ಗಾಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಗಂಭೀರ ಗಾಯಗೊಂಡ ಘಟನೆ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲದ ವಾಜರಹಳ್ಳಿಯಲ್ಲಿ ಸಿಲಿಂಡರ್ ಸ್ಪೋಟಗೊಂಡಿದೆ.

ಎರಡನೇ ಮಹಡಿಯನ್ನು ಚಿಕ್ಕಬಾಣಾವರದಲ್ಲಿ ಲೈನ್​ಮನ್​ ಆಗಿ ಕೆಲಸ ಮಾಡುತ್ತಿದ್ದ ಸಂಜಯ್ ಗೆ ಬಾಡಿಗೆ ಕೊಡಲಾಗಿತ್ತು.

ಆತ ಎಂಟು ವರ್ಷದಿಂದ ಬಾಡಿಗೆಗೆ ಇದ್ದ‌ನು. ಇಂದು ಏಕಾಎಕಿ ಈ ಅನಾಹುತ ನಡೆದಿದ್ದು, ಸಂಜಯ್(40) ಹಾಗೂ ಲೇಖನಾ (05) ಅವರನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಅಸ್ಪತ್ರೆಗೆ ರವಾನೆ ಮಾಡಲಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಅಗ್ನಿನಂದಿಸಿದ್ದಾರೆ. ಈ ಕುರಿತು ನೆಲಮಂಗಲ ಟೌನ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!