ಸಿಲಿಂಡರ್‌ ಸ್ಫೋಟ: ಮುದಗಾ ನೌಕಾನೆಲೆ ಲೇಬರ್ ಕಾಲೋನಿಯ 5 ಮನೆಗಳಿಗೆ ಬೆಂಕಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾರವಾರದ ಮುದಗಾ ನೌಕಾನೆಲೆಯ ಕಾರ್ಮಿಕ ಕಾಲೋನಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಾರ್ಮಿಕ ಕಾಲೋನಿಯಲ್ಲಿದ್ದ ಮನೆಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

Cylinder Blast

ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ನೌಕಾನೆಲೆಯಲ್ಲಿದ್ದ ಎನ್ ಸಿಸಿ ಗುತ್ತಿಗೆದಾರರ ಗೋದಾಮಿಗೆ ಬೆಂಕಿ ಹೊತ್ತಿಕೊಂಡಿದೆ. ಅಡುಗೆ ಸಿಲಿಂಡರ್ ಸ್ಪೋಟಗೊಂಡು ಬೆಂಕಿ ಹೊತ್ತಿಕೊಂಡಿದ್ದು, ನಾಲ್ಕೈದು ಮನೆಗಳಿಗೆ ವ್ಯಾಪಿಸಿದೆ. ಈ ಘಟನೆಯ ನಂತರ ಕಾರ್ಮಿಕರು ಶೆಡ್ ಬಿಟ್ಟು ಹೊರಗೆ ಓಡಿ ಬಂದಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿರುವ ಈ ಕಾಲೋನಿಯಲ್ಲಿ 150ಕ್ಕೂ ಹೆಚ್ಚು ಶೆಡ್ ಗಳಿವೆ. ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಕಾರ್ಮಿಕರು ಹರಸಾಹಸ ಪಡುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!