ಹೊಸದಿಗಂತ ವರದಿ ಶಿವಮೊಗ್ಗ :
ಮನೆಯಲ್ಲಿದ್ದ ಎರಡು ಸಿಲಿಂಡರ್‌ಗಳು ಸ್ಫೋಟವಾದ ಘಟನೆ ನಗರದ ಗೋಪಾಲಗೌಡ ಬಡಾವಣೆಯಲ್ಲಿ ಬುಧವಾರ ಸಂಭವಿಸಿದೆ.
ಇಲ್ಲಿನ ಕೃಷ್ಣಮಠ ಪಾರ್ಕ್ ಬಳಿ ಇರುವ ಪ್ರೊ. ಬಿ .ಕೃಷ್ಣಪ್ಪ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದ್ದು ಮನೆ ಗೋಡೆ, ಕಿಟಕಿ ಗಾಜುಗಳು ಜಖಂ ಆಗಿವೆ. ಆದರೆ ಯಾವುದೇ ಪ್ರಾಣ ಹಾನಿಯಾಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.