Friday, March 31, 2023

Latest Posts

ಗ್ಯಾಸ್ ರೀ ಫಿಲ್ಲಿಂಗ್ ವೇಳೆ ಸಿಲಿಂಡರ್ ಸ್ಫೋಟ: 13 ವರ್ಷದ ಬಾಲಕ ದುರ್ಮರಣ

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಬೆಂಗಳೂರಿನ ಹೆಬ್ಬಾಳ ಸಮೀಪದ ಗುಡ್ಡದಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು 13 ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಆರನೇ ತರಗತಿಯಲ್ಲಿ ಓದುತಿದ್ದ ಮಹೇಶ್(13) ಸಾವನ್ನಪ್ಪಿದ ಬಾಲಕ.

ಸಿಲಿಂಡರ್ ಫಿಲ್ಲಿಂಗ್ ಅಂಗಡಿಯಲ್ಲಿ ಘಟನೆ ನಡೆದಿದ್ದು, ಅಂಗಡಿ ಪಕ್ಕದಲ್ಲಿ ಬಾಲಕ ಮಹೇಶ್ ನಿಂತಿದ್ದ. ಸ್ಫೋಟದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

ಸಿಲಿಂಡರ್ ರೀ ಫಿಲ್ಲಿಂಗ್ ಮಾಡುವ ಗೋಡೌನ್​ ದೇವರಾಜ್ ಎಂಬುವರಿಗೆ ಸೇರಿದೆ. ಘಟನೆಯ ಬೆನ್ನಲ್ಲೆ ಗ್ಯಾಸ್ ರೀ ಫಿಲ್ಲಿಂಗ್ ಮಾಡುತ್ತಿದ್ದ ಲಿಯಾಕತ್ ಎಂಬಾತ ಸ್ಥಳದಿಂದ ಪರಾರಿಯಾಗಿದ್ದಾನೆ. ಸದ್ಯ ಲಿಯಾಕತ್ ವಿರುದ್ಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!